ಆಳಂದ: ‘ಪಟ್ಟಣದ ಪುರಸಭೆಯ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭವ್ಯ ಪುತ್ಥಳಿಯನ್ನು ಅನಾವರಣಗೊಳಿಸಿದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರಿಸುವ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಕರ್ನಾಟಕ ದಲಿತ ಸೇನೆ ರಾಜ್ಯಾಧ್ಯಕ್ಷ ಬಾಬುರಾವ ಅರಣೋದಯ ಎಚ್ಚರಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ‘ ದಲಿತಪರ ಸಂಘಟನೆಗಳು ಹಾಗೂ ಡಾ.ಅಂಬೇಡ್ಕರ್ ಅಭಿಮಾನಿಗಳ ಒತ್ತಾಯದ ಮೇಲೆ ಪುರಸಭೆಯು ಕಳೆದ ಅವಧಿಯಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿತ್ತು. ₨ 12ಲಕ್ಷ ವೆಚ್ಚದಲ್ಲಿ ಪುಣೆಯಿಂದ ಪ್ರತಿಮೆಯನ್ನು ತಂದು ಪುರಸಭೆಯಲ್ಲಿ ಇರಿಸಲಾಗಿದೆ.ಏಪ್ರಿಲ್ 14ರೊಳಗೆ ಸೂಕ್ತ ಸ್ಥಳದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಲು ಶಾಸಕರ ಅಧ್ಯಕ್ಷತೆಯಲ್ಲಿ ಸರ್ಕಾರ ಸಭೆ ಕರೆಯಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.