ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ

6

ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ

Published:
Updated:
ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ

ಚಿತ್ರದುರ್ಗ: ಮೂಡಬಿದರೆಯ ಆಳ್ವಾಸ್ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಎಸ್‌ಆರ್‌ಎಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿವೆ.ಆಳ್ವಾಸ್ ಕಾಲೇಜಿನ ಬಾಲಕರ ತಂಡ 90 ಅಂಕಗಳು ಮತ್ತು ಬಾಲಕಿಯರ ತಂಡ 101 ಅಂಕಗಳನ್ನು ಪಡೆದು ಅಗ್ರಸ್ಥಾನ ಗಳಿಸಿವೆ.ವೈಯಕ್ತಿಕ ಪ್ರಶಸ್ತಿಯನ್ನು ಬಾಲಕರ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಎಸ್.ಇ. ಷಂಶೀರ್ ಪಡೆದರು. ಷಂಶೀರ್ ತ್ರಿವಿಧ ಜಿಗಿತ, ಜಾವಲಿನ್ ಎಸೆತ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನದೊಂದಿಗೆ ಒಟ್ಟು 13 ಅಂಕಗಳನ್ನು ಗಳಿಸಿ, ವೈಯಕ್ತಿಕ ಪ್ರಶಸ್ತಿಗೆ ಭಾಜನರಾದರು.ಬಾಲಕಿಯರ ವಿಭಾಗದಲ್ಲಿಯೂ ಆಳ್ವಾಸ್ ಕಾಲೇಜಿನ ಬಿ.ಕೆ. ಸುಪ್ರೀತಾ 800 ಮೀಟರ್ ಓಟ, 1,500 ಮೀಟರ್, 3,000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ 15 ಅಂಕಗಳನ್ನು ಗಳಿಸಿ ವೈಯಕ್ತಿಕ ಪ್ರಶಸ್ತಿ ಗಿಟ್ಟಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry