ಮಂಗಳೂರು: ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ಮೂರು ದಿನಗಳ `ಆಳ್ವಾಸ್ ನುಡಿಸಿರಿ~ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಚಾಲನೆ ಸಿಗಲಿದೆ.

ರತ್ನಾಕರವರ್ಣಿ ವೇದಿಕೆಯಲ್ಲಿ ಬೆಳಿಗ್ಗೆ 9.30ಕ್ಕೆ ಹಿರಿಯ ಸಾಹಿತಿ ಪ್ರೊ.ಯು.ಆರ್.ಅನಂತಮೂರ್ತಿ ನುಡಿಸಿರಿ ಉದ್ಘಾಟಿಸಲಿದ್ದಾರೆ. ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಆಶಯ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ವಾಂಸ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಗೌರವಿಸಲಿದ್ದಾರೆ.

ಇದೇ ಸಂದರ್ಭದಲ್ಲಿ `ಆಳ್ವಾಸ್ ನುಡಿಸಿರಿ ಪ್ರಶಸ್ತಿ~ ಯನ್ನು ಡಾ.ಅಲೋಶಿಯಸ್ ಪಾವ್ಲ್ ಡಿಸೋಜ (ಕನ್ನಡ ಶಿಕ್ಷಣ), ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ (ಕನ್ನಡ ಸಾಂಸ್ಕೃತಿಕ ಸೇವೆ), ಸಿ.ಪಿ.ಕೃಷ್ಣಕುಮಾರ್ (ಸಾಹಿತ್ಯ), ಗಿರೀಶ್ ಕಾಸರವಳ್ಳಿ (ಚಲನಚಿತ್ರ), ಡಾ.ಸಿದ್ದಲಿಂಗಯ್ಯ (ಸಾಹಿತ್ಯ), ವೈಜಯಂತಿ ಕಾಶಿ (ನೃತ್ಯ, ಕಿರುತೆರೆ), ಚಿಟ್ಟಾಣಿ ರಾಮಚಂದ್ರ ಹೆಗಡೆ (ಯಕ್ಷಗಾನ), ಡಾ.ವಿಷ್ಣು ನಾಯ್ಕ (ಸಾಹಿತ್ಯ), ಸುಭದ್ರಮ್ಮ ಮನ್ಸೂರು (ರಂಗಭೂಮಿ), ಲೋಕ ಶಿಕ್ಷಣ ಟ್ರಸ್ಟ್, ಬೆಂಗಳೂರು-ಹುಬ್ಬಳ್ಳಿ (ಪ್ರಕಾಶನ)- ಇವರಿಗೆ ನೀಡಿ ಗೌರವಿಸಲಾಗುವುದು.

ಕಾಡಾನೆ ದಾಳಿ: ಕೊಡಗು ವ್ಯಕ್ತಿ ಸಾವು

ಸಕಲೇಶಪುರ: ಕಾಡಾನೆ ದಾಳಿಯಿಂದ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ತಾಲ್ಲೂಕಿನ ಶಿವನಹಳ್ಳಿ ಕೂಡಿಗೆ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಸೋಮವಾರಪೇಟೆ ತಾಲ್ಲೂಕಿನ ಶಿರಂಗಾಲ ಗ್ರಾಮದ ನಿವಾಸಿ ಅವಿನಾಶ್ (24) ಮೃತಪಟ್ಟ ದುರ್ದೈವಿ.

ಕರಡಿ ದಾಳಿ: ಗುರುವಾರ ನಸುಕಿನಲ್ಲಿ ತೋಟಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಅರಸೀಕೆರೆ ತಾಲ್ಲೂಕು ಜೆ.ಸಿ.ಪುರದಲ್ಲಿ ನಡೆದಿದೆ. ಶ್ರೀನಿವಾಸ್ರಾವ್ (52) ಕರಡಿ ದಾಳಿಯಿಂದ ಗಾಯಗೊಂಡಿರುವ ವ್ಯಕ್ತಿ. ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.