ಭಾನುವಾರ, ಜೂನ್ 13, 2021
22 °C

ಆಶ್ರಯ ಮನೆ ಹಂಚಿಕೆ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ತಾಲ್ಲೂಕಿನಾದ್ಯಂತ ಬಡಜನತೆಗೆ ಆಶ್ರಯ ಮನೆ ಹಂಚಿಕೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಜನಶಕ್ತಿ ಸಂಘದ ಸದಸ್ಯರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.



ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕಚೇರಿಯಲ್ಲಿ ಈ ಕುರಿತ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ಆದೇಶದ ಪ್ರಕಾರ ಗ್ರಾಮೀಣ ಪ್ರದೇಶದ, ಬಡತನ ರೇಖೆಗಿಂತ ಕೆಳಗೆ ಜೀವನ ನಡೆಸುತ್ತಿರುವ ಬಡವರಿಗೆ ಆಶ್ರಯ ಮನೆಗಳನ್ನು ಹಂಚಬೇಕು.

 

ಆದರೆ, ತಾ.ಪಂ. ಹಾಗೂ ಗ್ರಾ.ಪಂ. ಕಾರ್ಯದರ್ಶಿಗಳ ನಿರ್ಲಕ್ಷ್ಯದಿಂದ ಫಲಾನುಭವಿಗಳ ಆಯ್ಕೆಯಲ್ಲಿ ತಾರತಮ್ಯ ಎಸಗಲಾಗಿದೆ. ಈಗಾಗಲೇ ಮನೆಗಳನ್ನು ಪಡೆದವರಿಗೂ ಮತ್ತೆ ಮನೆ ಹಂಚಲಾಗಿದೆ ಎಂದು ಆರೋಪಿಸಲಾಗಿದೆ.



ತಾಲ್ಲೂಕಿನ ಕಾರೇಕಲ್ಲು ಗ್ರಾಮಕ್ಕೆ 100 ಆಶ್ರಯ ಮನೆಗಳು ಮಂಜೂರಾಗಿದ್ದು, ಈವರೆಗೂ ಬಡಜನರಿಗೆ ಹಂಚಿಕೆಯಾಗಿಲ್ಲ. ಇದನ್ನು ಕೂಡಲೇ ಪರಿಶೀಲಿಸಿ ಬಡಜನರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು, ಪರಮ ದೇವನಹಳ್ಳಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿಲ್ಲದೆ, ಜನರು ತೀವ್ರ ತೊಂದರೆ ಎದುರಿಸುತ್ತಿದ್ದು, ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.



ಹೊಸದಾಗಿ ಕೊಳವೆ ಬಾವಿ ಕೊರೆಯಿಸಬೇಕು ಎಂದು ಒತ್ತಾಯಿಸಿ ಈ ಹಿಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲಎಂದ ತಿಳಿಸಲಾಯಿತು.ತಾಲ್ಲೂಕು ಪಂಚಾಯಿತಿಯು ಈ ಕುರಿತು ಕ್ರಮ ಜರುಗಿಸಿ, ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ಗಳನ್ನು  ತಿಂಗಳಿಗೊಮ್ಮೆ ಶುದ್ಧಗೊಳಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.



ಸಂಘದ ರಾಜ್ಯ ಘಟಕದ ಅಧ್ಯಕ್ಷ ವೈ.ಪ್ರತಾಪ ರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಯಾಳ್ಪಿ ವಲಿಬಾಷಾ, ಉಪಾಧ್ಯಕ್ಷ ಸಿ.ಈಶ್ವರ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.