ಆಸಕ್ತಿಗನುಗುಣವಾಗಿ ಶಿಕ್ಷಣ ನೀಡಲು ಸಲಹೆ

7

ಆಸಕ್ತಿಗನುಗುಣವಾಗಿ ಶಿಕ್ಷಣ ನೀಡಲು ಸಲಹೆ

Published:
Updated:

ಗದಗ: ಮಕ್ಕಳ ಆಸಕ್ತಿ, ಅಭಿರುಚಿಗೆ ತಕ್ಕಂತೆ ಗುಣಮಟ್ಟದ ಶಿಕ್ಷಣ ಕೊಡಿಸಲು  ಪಾಲಕರು ಮುಂದಾಗಬೇಕು ಎಂದು ಸಂಸದ ಶಿವಕುಮಾರ ಉದಾಸಿ ಸಲಹೆ ನೀಡಿದರು. ಬೆಟಗೇರಿಯ ಮಂಜು ಶಿಕ್ಷಣ ಸಂಸ್ಥೆಯ ಮಂಜು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಶಾಸಕ ಶ್ರೀಶೈಲಪ್ಪ ಬಿದರೂರ ಮಾತನಾಡಿ, ಶಿಕ್ಷಕರು ಮಕ್ಕಳ ಮನಸಉ ಅರಿತು ಪರಿಣಾಮಕಾರಿ ಬೋಧನೆ ಮಾಡಬೇಕು ಎಂದರು.ಸದಾನಂದ ಹೊನ್ನಳ್ಳಿ ಮಕ್ಕಳ ಹಸ್ತಪ್ರತಿ ಬಿಡುಗಡೆಗೊಳಿಸಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಂಕರಸಿಂಗ್ ರಜಪೂತ ಅಧ್ಯಕ್ಷತೆ ವಹಿಸಿದ್ದರು.  ಪ್ರಕಾಶ, ಎಸ್.ವಿ. ಗುರ್ಲಹೊಸೂರ, ಬಿ.ಆರ್.ಪೂಜಾರ, ಸದಾನಂದ ಹೊನ್ನಳ್ಳಿ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಿಸಲಾಯಿತು. ಜಯಶ್ರೀ ಡಿಸೋಜಾ, ಮಂಜುನಾಥ ಮುಳಗುಂದ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿ.ಎಸ್. ಹುಳ್ಳಿ ಹಾಗೂ ಲಕ್ಷ್ಮೀ ಮುಳ್ಳಾಳ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry