ಆಸರೆ ತ್ವರಿತ ಹಸ್ತಾಂತರಕ್ಕೆ ಸೂಚನೆ

ಸೋಮವಾರ, ಮೇ 20, 2019
32 °C

ಆಸರೆ ತ್ವರಿತ ಹಸ್ತಾಂತರಕ್ಕೆ ಸೂಚನೆ

Published:
Updated:

ಬಾಗಲಕೋಟೆ: ನೆರೆ ಸಂತ್ರಸ್ತರಿಗೆ ಇನ್ನೂ ಹಸ್ತಾಂತರವಾಗದೇ ಬಾಕಿ ಉಳಿದಿರುವ `ಆಸರೆ~ ಮನೆಗಳನ್ನು ತ್ವರಿತವಾಗಿ ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎ. ಹರೀಶಗೌಡ ಸೂಚಿಸಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಆಸರೆ ಮನೆಗಳನ್ನು ಮೂರು ವರ್ಷವಾದರೂ ನಿರ್ಮಿಸಿಕೊಡದೇ ನಿರ್ಲಕ್ಷ್ಯ ಮಾಡಿರುವ ದಾನಿಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು, ಆ ಮನೆಗಳನ್ನು ಸರ್ಕಾರವೇ ಕೈಗೆತ್ತಿಕೊಳ್ಳಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.ಜಿಲ್ಲೆಯಲ್ಲಿ ಇತ್ತೀಚೆಗೆ ಕೃಷ್ಣಾ, ಮಲಪ್ರಭಾ ಮತ್ತು ಘಟಪ್ರಭಾ ನದಿ ವಾಪ್ತಿಯಲ್ಲಿ ಪ್ರವಾಹದಿಂದ ಉಂಟಾಗಿರುವ ಬೆಳೆಹಾನಿ ಬಗ್ಗೆ ನಿಕರವಾದ ವರದಿಯನ್ನು ಸರ್ಕಾರಕ್ಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಬೆಳೆಹಾನಿ ಬಗ್ಗೆ ಸರ್ಕಾರಕ್ಕೆ ತಕ್ಷಣ ವರದಿ ನೀಡಿದರೆ ತೊಂದರೆಗೆ ಒಳಗಾದವರಿಗೆ ಶೀಘ್ರ ಪರಿಹಾರ ನೀಡಲು ಸಹಾಯಕವಾಗುತ್ತದೆ ಎಂದು ಕಂದಾಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಮುಂಬರುವ ದಿನದಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದರೆ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿರುವಂತೆ ತಿಳಿಸಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶಕ್ಕೆ ಆದ್ಯತೆ ಮೇರೆಗೆ ನೀರು ಪೂರೈಕೆ ಮಾಡಲು ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ನಡೆಯುತ್ತಿರುವ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ಪಡೆದ ಅವರು ಉದ್ಯೋಗ ಖಾತರಿ ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದು, ಯಾವುದೇ ರೀತಿಯ ಅನ್ಯಾಯವಾಗಿದ್ದರೆ ಸಂಬಂಧಪಟ್ಟವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು.ಅಡುಗೆ ಅನಿಲ ಸಿಲಿಂಡರ್, ಪಡಿತರ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಅವರು, ಫಲಾನುಭವಿಗಳಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಪಡಿತರ ಪೂರೈಕೆ ಮಾಡಬೇಕು, ಪಡಿತರ ಅವ್ಯವಹಾರ ಗಮನಕ್ಕೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದರು.ಜಿಲ್ಲೆಯಲ್ಲಿ ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗ ಹರಡುತ್ತಿರುವ ಬಗ್ಗೆ ವರದಿಯಾಗಿದ್ದು, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರು ಬಂದಿದೆ ಎಂದ ಅವರು, ರೋಗದಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.ರಸಗೊಬ್ಬರ, ಬಿತ್ತನೆ ಬೀಜ ಸಮರ್ಪಕ ವಿತರಣೆಗೆ ಕ್ರಮಕೈಗೊಳ್ಳುವಂತೆ ಹೇಳಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಎಂ.ಕುಂಜಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಜೆ.ಸಿ. ಪ್ರಕಾಶ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry