ಮೆಲ್ಬರ್ನ್, (ಪಿಟಿಐ): ಇಲ್ಲಿನ ಪ್ರವಾಹ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದ್ದು ಕ್ವೀನ್ಸ್‌ಲ್ಯಾಂಡ್‌ನಲ್ಲಿ ಇನ್ನೆರಡು ಪ್ರದೇಶಗಳನ್ನು ಪ್ರವಾಹಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ.

ಇದೇ ವೇಳೆ ಎಮರಾಲ್ಡ್ ಮತ್ತು ಕರಾವಳಿ ಪಟ್ಟಣವಾದ ಬಂಡಾಬರ್ಗ್‌ನಲ್ಲಿ ಜನರನ್ನು ಸಂಪೂರ್ಣವಾಗಿ ಸ್ಥಳಾಂತರಿಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

ಹಲವೆಡೆಗಳಲ್ಲಿ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆಯಲ್ಲದೆ ಬಂಡಾಬರ್ಗ್‌ನಲ್ಲಿ ಸುಮಾರು 200 ಮನೆಗಳು ಅಪಾಯಕ್ಕೆ ಸಿಲುಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಐವತ್ತು ವರ್ಷಗಳಲ್ಲಿ ಕಂಡುಬಂದ ಅತ್ಯಂತ ದೊಡ್ಡ ಪ್ರವಾಹ ಇದಾಗಿದ್ದು ತಗ್ಗುಪ್ರದೇಶಗಳಲ್ಲಿ ವಾಸಿಸುವ ಜನ ಈಗಾಗಲೇ ಮನೆಗಳನ್ನು ಬಿಟ್ಟು ತೆರಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

2008ರಲ್ಲಿ ಕಂಡುಬಂದದ್ದಕ್ಕಿಂತಲೂ ಈ ಬಾರಿ ಪ್ರವಾಹ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಎಂದು ಸಮುದಾಯ ಸುರಕ್ಷತೆ ಇಲಾಖೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಎಮರಾಲ್ಡ್ ಪ್ರಾಂತ್ಯದ ತಗ್ಗು ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.