ಮಂಗಳವಾರ, ಮೇ 11, 2021
27 °C

ಆಸ್ತಿ ತೆರಿಗೆ ಪಾವತಿ ದಿನಾಂಕ ವಿಸ್ತರಣೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಸ್ತಿ ತೆರಿಗೆಯನ್ನು ಏ.30 ರ ಒಳಗೆ  ಪಾವತಿಸಿದರೆ ಬಿಬಿಎಂಪಿಯು ಆಸ್ತಿ ತೆರಿಗೆಯಲ್ಲಿ ಶೇ 5 ರಷ್ಟು ರಿಯಾಯಿತಿ ನೀಡುತ್ತಿದೆ. ನಗರದ ಜನತೆಯೂ ಕೂಡ ಆಸ್ತಿ ತೆರಿಗೆಯನ್ನು ಪಾವತಿಸಲು ಹಿಂದೆ ಬೀಳುತ್ತಿಲ್ಲ.ಆದರೆ,  ಈ ಆಸ್ತಿ ತೆರಿಗೆ ಪಾವತಿಯನ್ನು ಮೇ 15 ರ ವರೆಗೆ ವಿಸ್ತರಿಸಬೇಕು ಎಂದು ಶಾಸಕ ಪಿ.ಜಿ.ಆರ್.ಸಿಂಧ್ಯ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.ಈ ತಿಂಗಳು ಮಕ್ಕಳ ಶಾಲಾ ಪ್ರವೇಶಕ್ಕೆ ಹಣ ಪಾವತಿಸಬೇಕಾಗಿದೆ. ಮೇ 1 ರ ನಂತರ ಬರುವಂತಹ ತಿಂಗಳ ವೇತನದಲ್ಲಿ ಆಸ್ತಿ ತೆರಿಗೆ ಪಾವತಿಸಬೇಕಾಗಿದೆ. ಆದ್ದರಿಂದ ಆಸ್ತಿ ತೆರಿಗೆಯ ದಿನಾಂಕ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.