ಶನಿವಾರ, ಜೂನ್ 12, 2021
23 °C

ಆಸ್ಪತ್ರೆಗೆ ಶಾಸಕ ದಿಢೀರ್ ಭೇಟಿ: ತರಾಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಡಿ: ಪಟ್ಟಣದ ಹೊರ ವಲಯದ ಬಲರಾಮಚೌಕ ಹತ್ತಿರ ಇರುವ ಸಾರ್ವಜನಿಕ ಸಮುದಾಯ ಆರೋಗ್ಯ ಕೇಂದ್ರದ ಮೇಲೆ ಚಿತ್ತಾಪುರ ಶಾಸಕ ವಾಲ್ಮೀಕ ನಾಯಕ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ವೈದ್ಯರ ಗೈರುಹಾಜರಿ ಕಂಡು ಕೆಂಡಮಂಡಲವಾದ ಘಟನೆ ನಡೆದಿದೆ.ಮಂಗಳವಾರ ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ಏಕಾಏಕಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಯಾವೊಬ್ಬ ವೈದ್ಯರು ಇರದ ಕಾರಣ ಕೂಡಲೇ ತಾಲ್ಲೂಕು ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗೆ ದೂರವಾಣಿ ಕರೆ ಮಾಡಿ, ತರಾಟೆಗೆ ತೆಗೆದುಕೊಂಡ ಪ್ರಸಂಗ ಎದುರಾಗಿದೆ.ಡಾ. ಅಮೃತ ಹಾಗೂ ಡಾ.ಖಾಜಾಮೈನೋದ್ದಿನ್ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಂಡು ಕೂಡಲೇ ಇಲ್ಲಿಂದ ಬೆರೆ ಕಡೆ ವರ್ಗಾವಣೆ ಮಾಡಬೇಕು ಎಂದು ಅಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಭಾಗದ ಸಾರ್ವಜನಿಕರ ಹಿತದೃಷ್ಟಿಯಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಸುಮಾರು 50 ಬೆಡ್ಡಿನ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲಾಗಿದೆ. ಆದರೆ ವೈದ್ಯರ ದಿವ್ಯ ನಿರ್ಲಕ್ಷ್ಯದಿಂದ ಆಸ್ಪತ್ರೆಗೆ ರೋಗಿಗಳು ಬಾರದಂತಾಗಿದೆ. ಇಬ್ಬರು ವೈದ್ಯರು ಪಟ್ಟಣದ ತಮ್ಮ ಖಾಸಗಿ ಆಸ್ಪತ್ರೆಯಲ್ಲೇ ಹೆಚ್ಚು ಕಾಲ ಕಳೆಯುತ್ತಾರೆ. ಇದರಿಂದ ಆಸ್ಪತ್ರೆಗೆ ಯಾವಾಗಲೂ ಬೇಕಾಬಿಟ್ಟಿ ಬರುತ್ತಾರೆ. ಆದ್ದರಿಂದ ರೋಗಿಗಳು ಪರದಾಡುವಂತಾಗಿದೆ ಎಂದು ರೋಗಿಗಳು ಶಾಸಕರ ಹತ್ತಿರ ಅಳಲು ತೋಡಿಕೊಂಡರು.ರಾತ್ರಿ ವೇಳೆ ನರ್ಸ್ ಅಥವಾ ವೈದ್ಯರು ಆಸ್ಪತ್ರೆಯಲ್ಲಿ ಇರುವುದಿಲ್ಲ. ಮತ್ತು ಇಲ್ಲಿ ಸೂಕ್ತ ಚಿಕಿತ್ಸೆ ದೊರಕುತ್ತಿಲ್ಲ. ಇದರಿಂದ ಆಸ್ಪತ್ರೆ ಇದ್ದು ಇಲ್ಲದಂತಾಗಿದೆ. ಆದ್ದರಿಂದ ತಮ್ಮ ಕರ್ತವ್ಯ ಪಾಲನೆ ಮಾಡದೆ ಹಾಗೂ ಬೇಜವಾಬ್ದಾರಿಯಿಂದ ವರ್ತನೆ ಮಾಡುತ್ತಿರುವ ಇಂಥ ವೈದ್ಯರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಸಾರ್ವಜನಿಕರು ಶಾಸಕರಿಗೆ ಒತ್ತಾಯಿಸಿದ್ದಾರೆ.ಇದೇ ಸಂದರ್ಭದಲ್ಲಿ ಶಾಸಕರು ಆಸ್ಪತ್ರೆಯ ಪ್ರತಿಯೊಂದು ಕೋಣೆ ಹಾಗೂ ತಾಂತ್ರಿಕ ಸಾಮಾನು ವಿಕ್ಷೀಸಿ ನಂತರ ವೈದ್ಯರ ಹಾಗೂ ಸಿಬ್ಬಂದಿ ಹಾಜರಿ ಪುಸ್ತಕ ಪರಿಶೀಲಿಸಿದರು. ವಾಡಿ ಘಟಕದ ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ಬಾಗವಾತ ಸೂಳೆ ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.