ಭಾನುವಾರ, ಮೇ 9, 2021
25 °C

ಆಸ್ಪತ್ರೆಗೆ ಶಾಸಕ ವಜ್ಜಲ ಭೇಟಿ: ತರಾಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಿಂಗಸುಗೂರ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಶಾಸಕ ಮಾನಪ್ಪ ವಜ್ಜಲ ಗಬ್ಬೆದ್ದು ನಾರುತ್ತಿರುವ ಶೌಚಾಲಯ, ರೋಗಿಗಳಿಗೆ ನೀಡಿದ ಹರಿದ ಬೆಡ್‌ಶೀಟ್ ಸೇರಿದಂತೆ ಸಮಸ್ಯೆಗಳ ಕುರಿತು ಸ್ಥಳದಲ್ಲಿಯೇ ಇದ್ದ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.ಆಸ್ಪತ್ರೆಯ ಪ್ರತಿಯೊಂದು ವಾರ್ಡ್‌ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಹಾಗೂ ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ರೋಗಿಗಳಿಗೆ ಸಾಧ್ಯವಾದಷ್ಟು ಆಸ್ಪತ್ರೆಯಿಂದಲೇ ಔಷಧಿ ನೀಡಬೇಕು. ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸದಂತೆ ಎಚ್ಚರಿಕೆ ನೀಡಿದರು.ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ, ಸಿಟಿಸ್ಕ್ಯಾನ್ ಅಳವಡಿಕೆ ಸೇರಿದಂತೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಈಗಾಗಲೇ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ. ಡೆಂಗೆ ಜ್ವರ ಸೇರಿದಂತೆ ತೀವ್ರ ಸ್ವರೂಪದ ಕಾಯಿಲೆಗಳಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ ನೀಡಿದರು.

ಸುದ್ದಿಗಾರರೊಂದಿಗೆ, ಆಸ್ಪತ್ರೆ ಅವ್ಯವಸ್ಥೆ, ಔಷಧಿ ಪೂರೈಕೆ ಬಗ್ಗೆ ಸಾರ್ವಜನಿಕ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಯಿತು.ಸಣ್ಣ ಪುಟ್ಟ ಲೋಪದೋಷಗಳು ಕಂಡು ಬಂದಿದ್ದು, ಸರಿಪಡಿಸಿಕೊಂಡು ಸ್ವಚ್ಛತೆಗೆ ಆದ್ಯತೆ ನೀಡಲು ಎಚ್ಚರಿಕೆ ನೀಡಲಾಗಿದೆ ಎಂದರು.

ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಿವಬಸಪ್ಪ ಹೆಸರೂರ. ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಶಿವಾನಂದ ಐದನಾಳ. ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್ಲ, ಶರಣಗೌಡ, ಬಾಳೆಗೌಡ, ಗುಂಡಯ್ಯ ಸೊಪ್ಪಿಮಠ, ದೇವಪ್ಪ ಗೌಂಡಿ  ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.