ಮಂಗಳವಾರ, ಅಕ್ಟೋಬರ್ 22, 2019
22 °C

ಆಸ್ಪತ್ರೆಯಿಂದ ಅಣ್ಣಾ ಹಜಾರೆ ಬಿಡುಗಡೆ

Published:
Updated:

ಪುಣೆ, ಮಹಾರಾಷ್ಟ್ರ( ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಭಾನುವಾರ ಇಲ್ಲಿನ ಆಸ್ಪತ್ರೆಯಿಂದ ಬಿಡುಗಡೆಯಾದರು.~ನಾನು ಈಗ ಆರೋಗ್ಯವಾಗಿದ್ದೇನೆ. ಆದರೆ, ಸ್ಪಲ್ಪ ನಿತ್ರಾಣವಿದೆ. ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ~ ಎಂದು ಅವರು ತಿಳಿಸಿದ್ದಾರೆ.ಲೋಕಪಾಲ ಮಸೂದೆ ವಿವಾದಕ್ಕೆ ಸಂಬಂಧಿಸಿದಂತೆ ಅವರ ಮುಂದಿನ ಹೆಜ್ಜೆಯ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ, ಅವರು, ~ನಾನು ಸಂಪೂರ್ಣವಾಗಿ ಗುಣಮುಖವಾದ ನಂತರ ಅದರ ಕುರಿತು ಯೋಚಿಸುತ್ತೇನೆ~ ಎಂದಿದ್ದಾರೆ.ಇದೇ ಸಂದರ್ಭದಲ್ಲಿ ತಮ್ಮ ತಂಡದಲ್ಲಿನ ಸದಸ್ಯರ ವಿರುದ್ಧ ಎದ್ದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ  ಕೇಳಿದಾಗ ಅವರು, `ನಾನು ಹತ್ತು ದಿನಗಳ ಕಾಲ ಹೊರಜಗತ್ತಿನೊಂದಿಗೆ ಸಂಪರ್ಕ ಹೊಂದಿರಲಿಲ್ಲ~ ಎನ್ನುತ್ತ ನೇರವಾಗಿ ಉತ್ತರಿಸದೆ ಜಾರಿಕೊಂಡರು.ಪ್ರಸ್ತುತ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ರಾಜ್ಯಗಳಲ್ಲಿನ ಅವರ ಉದ್ದೇಶಿತ ಪ್ರವಾಸ ಕುರಿತು ಕೇಳಿದಾಗ, ~ವೈದ್ಯರು ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ಹೇಳಿದ್ದಾರೆ~ ಎಂದರು. ಆರೋಗ್ಯದಲ್ಲಿ ಸಂಪೂರ್ಣ ಸುಧಾರಣೆ ಕಂಡು ಬಂದ ನಂತರ ಅಣ್ಣಾ ಹಜಾರೆ ಅವರು ಭ್ರಷ್ಟಾಚಾರ ವಿರುದ್ಧದ ತಮ್ಮ ಹೋರಾಟಗಳಲ್ಲಿ ಭಾಗವಹಿಸಬಹುದೆಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)