ಆಸ್ಪತ್ರೆ ಅಭಿವೃದ್ಧಿ ಸಮಿತಿ ಶವಯಾತ್ರೆ

7

ಆಸ್ಪತ್ರೆ ಅಭಿವೃದ್ಧಿ ಸಮಿತಿ ಶವಯಾತ್ರೆ

Published:
Updated:

ದೊಡ್ಡಬಳ್ಳಾಪುರ: ಆರು ವರ್ಷಗಳಿಂದ ನಿಷ್ಕ್ರಿಯವಾಗಿರುವ ನಗರದ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಸಮಿತಿಯ ವೈಖರಿ ವಿರೋಧಿಸಿ ಫೆ.13ರಂದು ಅಣಕು ಶವಯಾತ್ರೆ ನಡೆಯಲಿದೆ ಎಂದು ಕರವೇ (ನಾರಾಯಣಗೌಡ ಬಣ) ತಾಲ್ಲೂಕು ಮುಖಂಡ ಡಿ.ಎನ್.ಮಂಜುನಾಥ್ ತಿಳಿಸಿದ್ದಾರೆ.ಶಾಸಕರೇ ಅಧ್ಯಕ್ಷರಾಗಿರುವ ಆಸ್ಪತ್ರೆ ಅಭಿವೃದ್ಧಿ ಸಮಿತಿ 6  ವರ್ಷಗಳಿಂದ ಸಭೆ ನಡೆಸಿಲ್ಲ. ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ. ರೋಗಿಗಳಿಗೆ ಸೂಕ್ತ ಸೌಲಭ್ಯ ದೊರೆಯದೇ ಪರದಾಡುವಂತಾಗಿದೆ. ಇದನ್ನು ಖಂಡಿಸಿ ಸೋಮವಾರ ಅಣಕು ಶವ ಯಾತ್ರೆ ನಡೆಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry