ಆಸ್ಪತ್ರೆ, ಎಂಜಿನಿಯರಿಂಗ್ ಕಾಲೇಜು ಕಟ್ಟಡ ಉದ್ಘಾಟನೆ ಇಂದು

7

ಆಸ್ಪತ್ರೆ, ಎಂಜಿನಿಯರಿಂಗ್ ಕಾಲೇಜು ಕಟ್ಟಡ ಉದ್ಘಾಟನೆ ಇಂದು

Published:
Updated:
ಆಸ್ಪತ್ರೆ, ಎಂಜಿನಿಯರಿಂಗ್ ಕಾಲೇಜು ಕಟ್ಟಡ ಉದ್ಘಾಟನೆ ಇಂದು

ಚಾಮರಾಜನಗರ: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಹೊಸ ಕಟ್ಟಡ ಮತ್ತು ತಾಲ್ಲೂಕಿನ ಬೇಡರಪುರದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡದ ಉದ್ಘಾಟನೆಯು ಅ. 20ರಂದು ನಡೆಯಲಿದೆ.ಎಂಜಿನಿಯರಿಂಗ್ ಕಾಲೇಜಿನ ಹೊಸ ಕಟ್ಟಡಗಳ ಉದ್ಘಾಟನಾ ಕಾರ್ಯ ಕ್ರಮವನ್ನು ಬೆಳಿಗ್ಗೆ 10.30ಗಂಟೆಗೆ ಹಮ್ಮಿಕೊಳ್ಳಲಾಗಿದೆ. ವೇದಿಕೆ ಕಾರ್ಯಕ್ರಮವು ನಗರದ ಸರ್ಕಾರಿ ಪೇಟೆಪ್ರೈಮರಿ ಶಾಲಾ ಆವರಣದಲ್ಲಿ ಬೆಳಿಗ್ಗೆ 11.30ಗಂಟೆಗೆ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಕಟ್ಟಡಗಳನ್ನು ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆವಹಿಸುವರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದ ಆರ್. ಧ್ರುವನಾರಾಯಣ, ಶಾಸಕರಾದ ಎಚ್.ಎಸ್. ಮಹದೇವಪ್ರಸಾದ್, ಜಿ.ಎನ್. ನಂಜುಂಡಸ್ವಾಮಿ, ಆರ್. ನರೇಂದ್ರ, ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ. ನಾಗಶ್ರೀ, ಚೂಡಾ ಅಧ್ಯಕ್ಷ ಎಸ್. ಬಾಲಸುಬ್ರಹ್ಮಣ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಹಾದೇವಿ, ಸದಸ್ಯ ಮಹಾಲಿಂಗು, ಬದನಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಗಫಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ. ಶಿವರಾಂ, ಜಿಲ್ಲಾಧಿಕಾರಿ ಎನ್. ಜಯರಾಂ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ಸೋಮಶೇಖರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.ಆಸ್ಪತ್ರೆ ಕಟ್ಟಡ:
ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಿರುವ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಹೊಸ ಕಟ್ಟಡದ ಉದ್ಘಾಟನೆಯು ಬೆಳಿಗ್ಗೆ 11ಗಂಟೆಗೆ ನಡೆಯಲಿದೆ.  ಸಭಾ ಕಾರ್ಯಕ್ರಮ ಸರ್ಕಾರಿ ಪೇಟೆಪ್ರೈಮರಿ ಶಾಲೆಯ ಆವರಣದಲ್ಲಿ ಜರುಗಲಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ ಎನ್. ಭಾಗ್ಯಮ್ಮ, ಸದಸ್ಯೆ ಎಂ. ಕಲಾವತಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry