ಸೋಮವಾರ, ಅಕ್ಟೋಬರ್ 14, 2019
24 °C

ಆಸ್ಪತ್ರೆ ಸಿಬ್ಬಂದಿ ಗೈರು ಹಾಜರಿ: ಬಗ್ಗೆ ಆಕ್ರೋಶ

Published:
Updated:

ಕನಕಪುರ: ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ಶನಿವಾರ ಭೇಟಿ ನೀಡಿ ಆಸ್ಪತ್ರೆ ವ್ಯವಸ್ಥೆ ಬಗ್ಗೆ ಪರಿಶೀಲಿಸಿ, ಕುಂದು-ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಸಿಬ್ಬಂದಿ ಗೈರುಹಾಜರಿಗೆ ಆಕ್ರೋಶ ವ್ಯಕ್ತಪಡಿಸಿದರು.  ಒಟ್ಟು ವೈದ್ಯರು ಮತ್ತು ಸಿಬ್ಬಂದಿ ಸೇರಿ 25 ಮಂದಿ ಇದ್ದು, ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಹಾಜರಾತಿ ಪುಸ್ತಕದಲ್ಲಿ ಮಾತ್ರ ಎಲ್ಲರ ಸಹಿಯಿದೆ ಎಂದು ಅಧಿಕಾರಿಗಳನ್ನು  ತರಾಟೆಗೆ ತೆಗೆದುಕೊಂಡರು. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಜ್ಲ್ಲಿಲಾ ಪಂಚಾಯಿತಿ ಸಿದ್ದವಿದ್ದರೂ ಅಧಿಕಾರಿಗಳು ಮಾತ್ರ ಸಮರ್ಪಕವಾಗಿ ಸ್ವಂದಿಸುತ್ತಿಲ್ಲ ಎಂದು ಆಪಾದಿಸಿದರು. ಆಸ್ಪತ್ರೆಗೆ ನೀಡಿರುವ ಉಪಕರಣಗಳು ಸದ್ಬಳಕೆಯಾಗುತ್ತಿಲ್ಲ ಎಂದು ಸಾರ್ವಜನಿಕರು ಈ ಸಂದರ್ಭದಲ್ಲಿ ಅಧ್ಯಕ್ಷರ ಗಮನಕ್ಕೆ ತಂದರು. ದಿನಕ್ಕೆ ಮೂರು ಬಾರಿ ಆಸ್ಪತ್ರೆ ಶುಚಿಗೊಳಿಸಬೇಕು. ಇದಕ್ಕೆ ಜಿಲ್ಲಾ ಪಂಚಾಯಿತಿಯಿಂದ ಹಣ ಬಿಡುಗಡೆ ಮಾಡಲಾಗುತ್ತದೆ. ಗುತ್ತಿಗೆದಾರರಿಂದ ಕೂಡಲೇ ಸ್ವಚ್ಚತೆ ನಿರ್ವಹಣೆ ಬಗ್ಗೆ ಕ್ರಮ ಕೈಗೊಳ್ಳಿ ಇಲ್ಲವಾದಲ್ಲಿ ಅವರಿಗೆ ನೀಡುವ ಹಣವನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇಲ್ಲಿನ ಮೂಲ ಸಮಸ್ಯೆಗಳನ್ನು ಪಟ್ಟಿ ಮಾಡಿ, ಜಿಲ್ಲಾ ಪಂಚಾಯಿತಿಗೆ ನೀಡಿದರೆ ಅಗತ್ಯ ಉಪಕರಣಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷ  ಶಿವಕೆಂಪೇಗೌಡ, ವೈದ್ಯಾಧಿಕಾರಿ ರಾಜು ಮತ್ತಿತರರು ಹಾಜರಿದ್ದರು.

 

Post Comments (+)