ಸೋಮವಾರ, ಜೂನ್ 14, 2021
22 °C

ಆಹಾರಧಾನ್ಯಕ್ಕೆ ಸಂಪೂರ್ಣ ಸಬ್ಸಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರಾಷ್ಟ್ರೀಯ ಆಹಾರ ಭದ್ರತೆ ಮಸೂದೆಯಲ್ಲಿ ಇರುವ ಪ್ರಸ್ತಾವಕ್ಕೆ ಅನುಗುಣವಾಗಿ ಸರ್ಕಾರ ಆಹಾರ ಸಬ್ಸಿಡಿಯನ್ನು ಸಂಪೂರ್ಣವಾಗಿ ನೀಡಲಿದೆ.ಆಹಾರ ಭದ್ರತೆ ಕಾಯ್ದೆಯನ್ನು ಜಾರಿ ಮಾಡಲು 2012-13ರಲ್ಲಿ ಆಹಾರ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ ಎಂದು  ಸಚಿವ ಪ್ರಣವ್ ಮುಖರ್ಜಿ ತಿಳಿಸಿದ್ದಾರೆ.ಆರ್ಥಿಕ ವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರದ ರೀತಿಯಲ್ಲಿ ಇತರ ರಂಗಗಳ ಸಬ್ಸಿಡಿಯನ್ನು ನಿರ್ಧರಿಸಲಾಗುತ್ತದೆ. ಆದರೆ ಆಹಾರ ಸಬ್ಸಿಡಿಯನ್ನು ಮಾತ್ರ ಸಂಪೂರ್ಣವಾಗಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.ಈಗ ಸಂಸತ್ತಿನ ಸ್ಥಾಯಿ ಸಮಿತಿ ಎದುರಿರುವ ಆಹಾರ ಭದ್ರತೆ ಮಸೂದೆ ಕಾಯ್ದೆಯಾಗಿ ಜಾರಿಗೆ ಬಂದ ನಂತರ ದೇಶದ ಶೇಕಡಾ 63.5ರಷ್ಟು ಜನರಿಗೆ ರಿಯಾಯ್ತಿ ದರದಲ್ಲಿ ಆಹಾರಧಾನ್ಯ ಒದಗಿಸಬೇಕಾಗುತ್ತದೆ. ಒಟ್ಟು ಆಹಾರ ಸಬ್ಸಿಡಿಯ ಮೊತ್ತ ಒಂದು ಲಕ್ಷ ಕೋಟಿಯಾಗಲಿದೆ ಎಂದು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.