ದೊಡ್ಡಬಳ್ಳಾಪುರ: `ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ~ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಖಜಾಂಚಿ ಹಾಗೂ ಕಿಮ್ಸ ಅಧ್ಯಕ್ಷ ಬಿ.ಮುನೇಗೌಡ ಹೇಳಿದರು.

ತಾಲ್ಲೂಕಿನ ಚಿಕ್ಕಬೆಳವಂಗಲ ಮಾರುತಿ ಕಲ್ಯಾಣ ಮಂದಿರದಲ್ಲಿ ನಡೆದ ದೊಡ್ಡಬೆಳವಂಗಲ ಹೋಬಳಿ ಮಟ್ಟದ ಜೆಡಿಎಸ್ ಯುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಯುವಕರನ್ನು ಒಗ್ಗೂಡಿಸುವುದು ಜೆಡಿಎಸ್ ಮುಖಂಡರ ಹೊಣೆಯಾಗಿದೆ. ಕಾರ್ಯಕರ್ತರ ಕುಂದುಕೊರತೆಗಳಿಗೆ ಸ್ಪಂದಿಸಿ ಸಹಕಾರ ನೀಡಬೇಕಿದೆ. ಈ ದಿಸೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡುವ ಉದ್ದೆೀಶದಿಂದ ಪ್ರತಿ ಬೂತ್ಗಳಲ್ಲಿ ಸಭೆ ನಡೆಸಲಾಗುತ್ತಿದೆ. ಹೋಬಳಿಗಳಲ್ಲಿ ಗ್ರಾಮ ಮಟ್ಟದ ಸಭೆಗಳನ್ನು ನಡೆಸಲಾಗುತ್ತಿದೆ. ದೊಡ್ಡಬೆಳವಂಗಲ ಹೋಬಳಿಯ ಎಲ್ಲಾ ಗ್ರಾಮಗಳಲ್ಲಿ ಸಭೆಗಳನ್ನು ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ತಾಲ್ಲೂಕಿನಲ್ಲಿ ಜೆಡಿಎಸ್ ಸಮಾವೇಶ ಹಮ್ಮಿಕೊಳ್ಳಲಾಗುವುದು~ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಎಚ್.ಅಪ್ಪಯ್ಯಣ್ಣ , ಜೆಡಿಎಸ್ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಮಂಜುನಾಥ್, ಜೆಡಿಎಸ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ್, ಮುಖಂಡರಾದ ಚಿಕ್ಕರಾಮಕೃಷ್ಣಪ್ಪ, ಜೆಡಿಎಸ್ ಮುಖಂಡ ಎಲ್.ವೆಂಕಟೇಶ್, ವೆಂಕಟರಮಣಪ್ಪ, ಧರ್ಮೇಂದ್ರ, ಸಿ.ಎಚ್.ರಾಮಕೃಷ್ಣಯ್ಯ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.