ಭಾನುವಾರ, ಮೇ 22, 2022
23 °C

ಆಹಾರ ಭದ್ರತೆ: `ಸುಪ್ರೀಂ'ಗೆ ಪಿಐಎಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರಾಷ್ಟ್ರೀಯ ಆಹಾರ ಭದ್ರತಾ ಮಸೂದೆ ಜಾರಿಗೆ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಲು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಶನಿವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.`ತುರ್ತು ಸ್ಥಿತಿ ಇಲ್ಲದಿದ್ದರೂ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಸಂವಿಧಾನದ ಸೆಕ್ಷೆನ್ 123 ಅಡಿ ರಾಷ್ಟ್ರಪತಿಯವರು ಸುಗ್ರೀವಾಜ್ಞೆ ರದ್ದುಪಡಿಸುವ ಅಧಿಕಾರ ಹೊಂದಿದ್ದಾರೆ' ಎಂದು ಪಿಐಎಲ್ ಸಲ್ಲಿಸಿರುವ ವಕೀಲ ಎಂ.ಎಲ್. ಶರ್ಮಾ ಹೇಳಿದ್ದಾರೆ.ಮಸೂದೆಗೆ ಶುಕ್ರವಾರ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಅಂಕಿತ ಹಾಕಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.