ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುವುದಾಗಿ ಸರ್ಕಾರ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಹಿರಿಯ ಕವಿ ಡಾ.ಜಿ.ಎಸ್.ಶಿವರುದ್ರಪ್ಪ ಒತ್ತಾಯಿಸಿದ್ದಾರೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2009ರ ಅನ್ವಯ ಆರರಿಂದ ಹದಿನಾಲ್ಕನೇ ವಯಸ್ಸಿನವರೆಗೆ ಮಗುವಿನ ಮಾತೃ ಭಾಷೆಯೇ ಶಿಕ್ಷಣದ ಮಾಧ್ಯಮವಾಗಿರಬೇಕು.

ಈ ಕಾಯ್ದೆಯನ್ನು ಸಂಸತ್ ಸಹ ಅಂಗೀಕರಿಸಿದೆ. ಆದ್ದರಿಂದ ಖಾಸಗಿ ಶಾಲೆಗಳಲ್ಲೂ ಆರನೇ ತರಗತಿಯಿಂದ ಆಂಗ್ಲ ಮಾಧ್ಯಮಕ್ಕೆ ಅವಕಾಶ ನೀಡದಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಆರನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸಿದರೆ ಕನ್ನಡ ಮಾಧ್ಯಮದ ಶಾಲೆಗಳು ಅವನತಿಯತ್ತ ಸಾಗುತ್ತವೆ.

ಕನ್ನಡ ಮಾಧ್ಯಮದ ಶಾಲೆಗಳಿಗೆ ಮಾರಕವಾಗಿರುವ ಈ ಆದೇಶವನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು. ಇಂಗ್ಲಿಷ್ ಭಾಷಾ ಕಲಿಕೆಗೂ ಮತ್ತು ಶಿಕ್ಷಣದ ಮಾಧ್ಯಮವಾಗಿ ಇಂಗ್ಲಿಷ್ ಬಳಸುವುದಕ್ಕೂ ಇರುವ ವ್ಯತ್ಯಾಸವನ್ನು ಜನರಿಗೆ ತಿಳಿಸಬೇಕು. ಒಂದರಿಂದ ಹತ್ತನೇ ತರಗತಿವರೆಗೆ ಮಾತೃ ಭಾಷೆಯನ್ನೇ ಶಿಕ್ಷಣ ಮಾಧ್ಯಮವನ್ನಾಗಿ ಜಾರಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂಗ್ಲಿಷ್ ಅನ್ನು ಭಾಷೆಯಾಗಿ ಕಲಿಯುವುದಕ್ಕೆ ಅಭ್ಯಂತರವಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.