ಇಂಗ್ಲಿಷ್ ಶಿಕ್ಷಕರ ನೇಮಕವಾಗಲಿ

7

ಇಂಗ್ಲಿಷ್ ಶಿಕ್ಷಕರ ನೇಮಕವಾಗಲಿ

Published:
Updated:

ಅನೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಸಮಸ್ಯೆಯಿಂದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖಮಾಡಿರುವುದು ವಿಪರ್ಯಾಸದ ಸಂಗತಿಯೇ ಸರಿ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಇಂಗ್ಲಿಷ್ ವಿಷಯಗಳ ಶಿಕ್ಷಕರಿಲ್ಲದೆ ವಿಜ್ಞಾನ ವಿಷಯದ ಶಿಕ್ಷಕರು ಇಂಗ್ಲಿಷ್ ಭಾಷೆಯನ್ನೂ ಸಹ ಬೋಧನೆ ಮಾಡಬೇಕಾದ ಒತ್ತಡದಲ್ಲಿದ್ದಾರೆ.ರಾಜ್ಯದ ಅನೇಕ ಸರ್ಕಾರಿ ಶಾಲೆಗಳ ಪರಿಸ್ಥಿತಿ ಹೀಗಾಗಿದೆ. ವಿಜ್ಞಾನ ಮತ್ತು ಇಂಗ್ಲಿಷ್ ಎರಡು ವಿಷಯಗಳನ್ನು ಬೋಧಿಸ ಬೇಕಾಗಿರುವುದರಿಂದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ.ಸರ್ಕಾರಿ ಶಾಲೆಗಳ ಇಂತಹ ಅನೇಕ ಸಮಸ್ಯೆ ಗಳಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗಿದ್ದಾರೆ.ಪರಿಸ್ಥಿತಿ ಹೀಗೆ ಮುಂದುವರೆದಿರುವುದರಿಂದ ಈಗಾಗಲೇ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬಂದಿರುವುದು ವಿಪರ್ಯಾಸ. ಹಾಗಾಗಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ಸರ್ಕಾರ ಬೇಗನೆ ನೇಮಕ ಮಾಡಲಿ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry