ಶನಿವಾರ, ಏಪ್ರಿಲ್ 17, 2021
22 °C

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೆ ಯುವರಾಜ್ ಮರಳುವ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಇಂಗ್ಲೆಂಡ್ ವಿರುದ್ಧದ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಯ್ಕೆ ಸೋಮವಾರ ನಡೆಯಲಿದ್ದು, ಯುವರಾಜ್ ಸಿಂಗ್ ಸ್ಥಾನ ಪಡೆಯುವ ಸಾಧ್ಯತೆಯಿದೆ.ನಾಲ್ಕು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಅಹಮದಾಬಾದ್‌ನಲ್ಲಿ ನವೆಂಬರ್ 15 ರಿಂದ 19ರ ವರೆಗೆ ನಡೆಯಲಿದೆ. ಸಂದೀಪ್ ಪಾಟೀಲ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿ ಸೋಮವಾರ ಇಲ್ಲಿ ಸಭೆ ಸೇರಲಿದೆ. ಕ್ಯಾನ್ಸರ್‌ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ `ಯುವಿ~ ಈಗಾಗಲೇ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ.ಕೇಂದ್ರ ವಲಯ ವಿರುದ್ಧದ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಉತ್ತರ ವಲಯವನ್ನು ಪ್ರತಿನಿಧಿಸಿದ್ದ ಯುವರಾಜ್ ಆಕರ್ಷಕ ದ್ವಿಶತಕ ಗಳಿಸಿದ್ದರು. ಅದೇ ರೀತಿ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ 59 ರನ್ ಗಳಿಸಿದ್ದಲ್ಲದೆ, ಬೌಲಿಂಗ್‌ನಲ್ಲೂ ಮಿಂಚಿ ಐದು ವಿಕೆಟ್ ಪಡೆದಿದ್ದರು.ಆದ್ದರಿಂದ ಆಯ್ಕೆ ಸಮಿತಿ ಅವರನ್ನು ಕಡೆಗಣಿಸುವ ಸಾಧ್ಯತೆ ಕಡಿಮೆ. ಪಂಜಾಬ್‌ನ ಈ ಬ್ಯಾಟ್ಸ್‌ಮನ್ ಕಳೆದ ವರ್ಷ ಕೋಲ್ಕತ್ತದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಕೊನೆಯದಾಗಿ ಆಡಿದ್ದರು.ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ತಂಡದಲ್ಲಿದ್ದ ಹೆಚ್ಚಿನ ಎಲ್ಲಾ ಆಟಗಾರರು ತಮ್ಮ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ಆಯ್ಕೆ ಸಮಿತಿ ಯಾವುದೇ ಅಚ್ಚರಿಯ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿಲ್ಲ. ನಾಯಕ ಮಹೇಂದ್ರ ಸಿಂಗ್ ದೋನಿ ಅಲ್ಲದೆ, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಚೇತೇಶ್ವರ ಪೂಜಾರ ಮತ್ತು ಸುರೇಶ್ ರೈನಾ ಬ್ಯಾಟ್ಸ್‌ಮನ್‌ಗಳಾಗಿ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ.ಜಹೀರ್ ಖಾನ್, ಉಮೇಶ್ ಯಾದವ್, ಇಶಾಂತ್ ಶರ್ಮ, ಆರ್. ಅಶ್ವಿನ್, ಪ್ರಗ್ಯಾನ್ ಓಜಾ ಬೌಲರ್‌ಗಳಾಗಿ ಕಾಣಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ.ಅದೇ ರೀತಿ ಹರಭಜನ್ ಸಿಂಗ್ ಅಥವಾ ಪಿಯೂಷ್ ಚಾವ್ಲಾ ಕೂಡಾ ತಂಡದಲ್ಲಿ ಸ್ಥಾನ ಪಡೆಯಬಹುದು.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.