ಇಂಡೋನೇಷ್ಯಾಗೆ ಆರಕ್ಷಕನ ಪಯಣ

7

ಇಂಡೋನೇಷ್ಯಾಗೆ ಆರಕ್ಷಕನ ಪಯಣ

Published:
Updated:

ಪಿ.ವಾಸು ನಿರ್ದೇಶನದಲ್ಲಿ ಉಪೇಂದ್ರ ನಾಯಕರಾಗಿ ಅಭಿನಯಿಸುತ್ತಿರುವ `ಆರಕ್ಷಕ~ ಚಿತ್ರದ ಮೂರು ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಇಂಡೋನೇಷ್ಯಾಗೆ ಪ್ರಯಾಣ ಬೆಳೆಸಿದೆ. ಇಮ್ರಾನ್ ನೃತ್ಯ ನಿರ್ದೇಶನ ಮಾಡುವ ಈ ಹಾಡುಗಳ ಚಿತ್ರೀಕರಣದಲ್ಲಿ ಉಪೇಂದ್ರ, ರಾಗಿಣಿ, ಸದಾ ಭಾಗವಹಿಸುತ್ತಾರೆ.ಕೃಷ್ಣಪ್ರಜ್ವಲ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕೇರಳ, ಮೈಸೂರು, ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಗುರುಕಿರಣ್ ಸಂಗೀತ, ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ವೇಣು ಕಲಾ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನಇದೆ. ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಸೀತಾ, ಸದಾ, ರಾಗಿಣಿ, ಶಯಾಜಿ ಶಿಂಧೆ, ಶರಣ್ ಮುಂತಾದವರಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry