ಶನಿವಾರ, ಏಪ್ರಿಲ್ 10, 2021
32 °C

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 71 ಪರೀಕ್ಷಾ ಕೇಂದ್ರ, 22,278 ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಾದ್ಯಂತ ಏಪ್ರಿಲ್ 1ರಿಂದ 13ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 71 ಪರೀಕ್ಷಾ ಕೇಂದ್ರಗಳಲ್ಲಿ 22,278 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ವಿದ್ಯಾರ್ಥಿಗೂ ಆಸನದ ವ್ಯವಸ್ಥೆ ಕಡ್ಡಾಯ ಮಾಡಲಾಗಿದೆ. ಆ ರೀತಿ ಏನೇ ಸಮಸ್ಯೆ ಇದ್ದರೂ ಮೊದಲೇ ಸೂಚಿಸಲು ತಿಳಿಸಲಾಗಿತ್ತು. ಎಲ್ಲಿ ತೊಂದರೆ ಇದೆಯೋ ಅಲ್ಲಿನ ಸಮಸ್ಯೆ ಪರಿಹರಿಸಲಾಗಿದೆ. ಹೀಗಾಗಿ ಆಸನದ ಸಮಸ್ಯೆ ಆಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಚೇರಿ ಮೂಲಗಳು ತಿಳಿಸಿವೆ.

 

ನೆಲದ ಮೇಲೆ, ಮರದ ಕೆಳಗೆ ವಿದ್ಯಾರ್ಥಿಗಳನ್ನು ಕೂಡ್ರಿಸಿ ಪರೀಕ್ಷೆ ಬರೆಸಬಾರದು ಎಂದು ಸೂಚನೆ ನೀಡಲಾಗಿದೆ. ಒಂದು ವೇಳೆ ಅಂಥ ಪ್ರಕರಣ ನಡೆದರೆ ಇಲಾಖೆಯಿಂದ ಕಠಿಣ ಕ್ರಮ ಜರುಗಿಸಲಾಗುವುದು. ಸಂಬಂಧಪಟ್ಟವರು ಅಮಾನತ್ ಆಗಲಿದ್ದಾರೆ ಎಂದು ಶಿಕ್ಷಣಾಧಿಕಾರಿಗಳು ಗುರುವಾರ ‘ಪ್ರಜಾವಾಣಿ’ಗೆ ತಿಳಿಸಿದರು.ತಾಲ್ಲೂಕುವಾರು ಪರೀಕ್ಷಾ ಕೇಂದ್ರ: ದೇವದುರ್ಗ ತಾಲ್ಲೂಕಿನಲ್ಲಿ 7, ಲಿಂಗಸುಗೂರು ತಾಲ್ಲೂಕಿನಲ್ಲಿ 11, ಮಾನ್ವಿ ತಾಲ್ಲೂಕಿನಲ್ಲಿ 11, ರಾಯಚೂರು ತಾಲ್ಲೂಕಿನಲ್ಲಿ 28 ಹಾಗೂ ಸಿಂಧನೂರು ತಾಲ್ಲೂಕಿನಲ್ಲಿ 14 ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 71 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಈ 71 ಪರೀಕ್ಷಾ ಕೇಂದ್ರಗಳನ್ನು 18 ಘಟಕಗಳನ್ನಾಗಿ ವಿಂಗಡಿಸಲಾಗಿದೆ.

 

ಪರೀಕ್ಷಾ ಅಕ್ರಮ ತಡೆಗಟ್ಟಿ ಕ್ರಮ ಕೈಗೊರ್ಳಳಲು ಜಿಲ್ಲಾ ಮಟ್ಟದಲ್ಲಿ 18 ಜಾಗೃತ ದಳಗಳನ್ನು ವಿವಿಧ ಇಲಾಖೆಯ ಹಿರಿಯ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿದೆ.

ಪ್ರತಿ ತಾಲ್ಲೂಕು ಮಟ್ಟದಲ್ಲಿ ಕನಿಷ್ಠ 3 ಜಾಗೃತ ದಳ ತಂಡಗಳನ್ನು ರಚಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಆಯಾ ಕೇಂದ್ರದ ಅಭ್ಯರ್ಥಿ ಸಂಖ್ಯೆಗನುಗುಣವಾಗಿ 2 ಅಥವಾ 3 ಅಧಿಕಾರಿಗಳನ್ನು ಸ್ಥಾನಿಕ ಜಾಗೃತ ದಳ ಸಿಬ್ಬಂದಿಯಾಗಿ ನೇಮಿಸಲಾಗಿದೆ. ಇವರು ಪ್ರತಿ ದಿನ ಒಂದು ಪರೀಕ್ಷಾ ಕೇಂದ್ರದಿಂದ ಮತ್ತೊಂದು ಕೇಂದ್ರಕ್ಕೆ ಬದಲಾವಣೆಯಾಗುತ್ತಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

 

ಬಂದೋಬಸ್ತ್: ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ಕಲಂ 144ರನ್ವಯ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಪರೀಕ್ಷಾ ದಿನಗಳಂದು ( ಏಪ್ರಿಲ್ 1,5,7,8,11 ಮತ್ತು 13ರಂದು) ಪರೀಕ್ಷಾ ಸಮಯ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಝರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.