ಇಂದಿನಿಂದ ಕಾಂಗ್ರೆಸ್ ನಡಿಗೆ-ಜನರ ಬಳಿಗೆ

ಶನಿವಾರ, ಜೂಲೈ 20, 2019
28 °C

ಇಂದಿನಿಂದ ಕಾಂಗ್ರೆಸ್ ನಡಿಗೆ-ಜನರ ಬಳಿಗೆ

Published:
Updated:

ಚನ್ನಪಟ್ಟಣ: ತಾಲ್ಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ಹಾಗೂ ವಿರುಪಾಕ್ಷಿಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ 10.30 ಗಂಟೆಗೆ `ಕಾಂಗ್ರೆಸ್ ನಡಿಗೆ-ಜನರ ಬಳಿಗೆ~ ಎಂಬ ವಿನೂತನ ಕಾರ್ಯಕ್ರಮವನ್ನು  ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಘುನಂದನ್ ರಾಮಣ್ಣ ತಿಳಿಸಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 60 ದಿನಗಳ ಕಾಲ ನಡೆಯುವ ಈ ಅಭಿಯಾನದಲ್ಲಿ  ಕಾಂಗ್ರೆಸ್  ಪಕ್ಷದ ತಳಮಟ್ಟದ ಕಾರ್ಯಕರ್ತರನ್ನು ಸಂಘಟಿಸಲಾಗುತ್ತದೆ ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಎಂ. ಮಲವೇಗೌಡ ಮಾತನಾಡಿ ಮತದಾರರೊಂದಿಗೆ ಮುಖಾಮುಖಿ ಕಾರ್ಯಕ್ರಮ ಅರ್ಥಪೂರ್ಣವಾಗಿ ವಿಭಿನ್ನ ಹಾಗೂ ವಿಶಿಷ್ಟವಾಗಿ ರಚಿಸಿ ಪ್ರತಿ ಬೂತ್ ಮಟ್ಟದಲ್ಲಿ ಸಮಿತಿ ರಚಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ಪಡೆಯುವಂತೆ ಮಾಡಲಾಗುವುದು ಎಂದು ತಿಳಿಸಿದರು.ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಾದು ಕಾಂಗ್ರೆಸ್ ಜಿಲ್ಲಾ ಮಹಿಳಾ ಅಧ್ಯಕ್ಷೆ ಪದ್ಮಕೃಷ್ಣಯ್ಯ, ಕೆಪಿಸಿಸಿ ಸದಸ್ಯ ಅಸ್ಮತ್ ಪಾಷಾನಿಜಾಯಿ, ಜಿಲ್ಲಾ ಕಾರ್ಯದರ್ಶಿ ತಿಮ್ಮೇಶ್‌ಪ್ರಭು, ಜಿ.ಪಿ.ಮಾಜಿ ಸದಸ್ಯ ಸ್ವಾಮಿ, ನಗರಸಭಾ ಸದಸ್ಯರುಗಳಾದ ಪುರುಷೋತ್ತಮ್, ಸುನೀಲ್, ಜಯಮಾಲ ನಂಜುಂಡಯ್ಯ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry