ಶುಕ್ರವಾರ, ಜೂಲೈ 3, 2020
24 °C

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ

ರಾಮನಗರ: ವಿದ್ಯಾರ್ಥಿ ಜೀವನದ ‘ಟರ್ನಿಂಗ್ ಪಾಯಿಂಟ್’ ಎಂದು ಪರಿಗಣಿಸಲಾಗಿರುವ ದ್ವಿತೀಯ ಪಿ.ಯು. ಪರೀಕ್ಷೆ ಗುರುವಾರದಿಂದ ಆರಂಭವಾಗಲಿದ್ದು, ಈ ಬಾರಿ ಜಿಲ್ಲೆಯಲ್ಲಿ 9.832 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ.ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳ ಪೈಕಿ 5122 ಬಾಲಕರು ಹಾಗೂ 4710 ಬಾಲಕಿಯರಾಗಿದ್ದಾರೆ. ಹೊಸದಾಗಿ ಪರೀಕ್ಷೆ 7437 ಪರೀಕ್ಷೆ ಬರೆಯುತ್ತಿದ್ದಾರೆ. 458 ಬಾಹ್ಯ ವಿದ್ಯಾರ್ಥಿಗಳಾಗಿದ್ದರೆ, 1948 ಪುನರಾವರ್ತಿತ ವಿದ್ಯಾರ್ಥಿಗಳು ವಿದ್ಯಾರ್ಥಿಗಳಾಗಿದ್ದಾರೆ ಎಂದು ಪಿ.ಯು ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಎಂ.ಚಲುವಪ್ಪ ತಿಳಿಸಿದ್ದಾರೆ.ಒಟ್ಟಾರೆ ಪರೀಕ್ಷಾರ್ಥಿಗಳ ಪೈಕಿ ಕಲಾ ವಿಭಾಗದಲ್ಲಿ 5603 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2621 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 1608 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಪರೀಕ್ಷಾ ಕೇಂದ್ರಗಳು: ದ್ವಿತೀಯ ಪಿ.ಯು ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ 13 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ. ರಾಮನಗರ ತಾಲ್ಲೂಕಿನಲ್ಲಿ 4, ಚನ್ನಪಟ್ಟಣ ತಾಲ್ಲೂಕಿನಲ್ಲಿ 3, ಕನಕಪುರ ತಾಲ್ಲೂಕಿನಲ್ಲಿ 4 ಹಾಗೂ ಮಾಗಡಿ ತಾಲ್ಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ನಕಲು ನಡೆಯದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಪಿ.ಯು ಕಾಲೇಜು ಉಪನ್ಯಾಸಕರನ್ನು ಪರೀಕ್ಷಾ ಸಿಬ್ಬಂದಿಯನ್ನಾಗಿ ನೇಮಿಸಿಕೊಳ್ಳಲಾಗಿದೆ.ವಿಚಕ್ಷಣ ದಳ: 13 ಪರೀಕ್ಷಾ ಕೇಂದ್ರಗಳಲ್ಲಿಯೂ ತಲಾ ಒಬ್ಬರು ಪರೀಕ್ಷಾ ಅಧೀಕ್ಷಕರು ಕಾರ್ಯ ನಿರ್ವಹಿಸುತ್ತಾರೆ. ಅವರಲ್ಲದೆ ಎಲ್ಲ ಕೇಂದ್ರಗಳಲ್ಲಿ ಒಬ್ಬೊಬ್ಬರು ಸಹ ಮುಖ್ಯ ಅಧೀಕ್ಷಕರು ಇರುತ್ತಾರೆ. ಪರೀಕ್ಷಾ ಕೇಂದ್ರಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆಗಳಿಗೆ ಅನುಗುಣವಾಗಿ ‘ಸಿಟ್ಟಿಂಗ್ ಸ್ಕ್ವಾಡ್’ಗಳನ್ನು ನೇಮಿಸಲಾಗಿದೆ. ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಇಬ್ಬರು, ಕೆಲವೆಡೆ ಮೂವರು ‘ಸಿಟ್ಟಿಂಗ್ ಸ್ಕ್ವಾಡ್’ಗಳು ಕೆಲಸ ಮಾಡುತ್ತಾರೆ. ಇದರ ಜತೆಗೆ ಸಂಚಾರಿ ವಿಚಕ್ಷಣ ದಳವನ್ನು ನೇಮಿಸಲಾಗಿದೆ.ಪರೀಕ್ಷಾ ಕೇಂದ್ರದ ಬಳಿ ನಿಷೇಧಾಜ್ಞೆ: ನಕಲು ತಪ್ಪಿಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ ಬಳಿಯ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಅಲ್ಲದೆ ಈ  ಕೇಂದ್ರಗಳ ಸುತ್ತ ಪೊಲೀಸರ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.