ಸೋಮವಾರ, ಮೇ 10, 2021
20 °C

ಇಂದಿನಿಂದ ದ್ವಿತೀಯ ಪಿಯು ಮೌಲ್ಯಮಾಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೇತನ ತಾರತಮ್ಯ ನಿವಾರಣೆ ಸೇರಿದಂತೆ ಉಪನ್ಯಾಸಕರ ಬೇಡಿಕೆಗಳನ್ನು ಗುರುವಾರದ ಒಳಗೆ ಈಡೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸುಗಮವಾಗಿ ನಡೆಯಲಿದೆ.ವಿವಿಧ ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾಯಿತ ಪ್ರತಿನಿಧಿಗಳೊಂದಿಗೆ ಸಚಿವ ಕಾಗೇರಿ ಅವರು ಭಾನುವಾರ ಸಮಾಲೋಚನೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವುದಾಗಿ ರಾಜ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.ವೇತನ ತಾರತಮ್ಯ ನಿವಾರಣೆ ಸಂಬಂಧ ಸಿಎಂ ಅವರೊಂದಿಗೆ ಸಮಾಲೋಚಿಸಬೇಕಾಗಿದೆ. ಪದಾಧಿಕಾರಿಗಳ ಸಭೆ ಕರೆದು ಪರಿಹಾರ ಕಂಡುಕೊಳ್ಳಲಾಗುವುದು.ಪ್ರೊಬೇಷನರಿ ಅವಧಿ ಮುಕ್ತಾಯ, ಕಾಲ್ಪನಿಕ ಬಡ್ತಿ ಇತ್ಯಾದಿ ವಿಷಯಗಳನ್ನು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ 3 ದಿನಗಳಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಕಾಗೇರಿ ಭರವಸೆ ನೀಡಿದ್ದಾರೆ ಎಂದು ಶ್ರೀಕಂಠೇಗೌಡ ತಿಳಿಸಿದರು.ವೇತನ ತಾರತಮ್ಯ ನಿವಾರಣೆಗೆ ಸಂಬಂಧಿಸಿದಂತೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಗುರುವಾರದ ಒಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಶುಕ್ರವಾರದಿಂದ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.