ಗುರುವಾರ , ಮೇ 26, 2022
23 °C

ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಚುನಾವಣಾ ಪ್ರಕ್ರಿಯೆ ಗುರುವಾರದಿಂದ ಆರಂಭವಾಗಲಿದ್ದು, ಆಗಸ್ಟ್13ಕ್ಕೆ ಕೊನೆಗೊಳ್ಳಲಿದೆ.ಜುಲೈ 22ಕ್ಕೆ ತಾಲ್ಲೂಕು ಪದಾಧಿಕಾರಿಗಳ ಆಯ್ಕೆ, ಜುಲೈ 25 ರಿಂದ ಆ.5ರವರೆಗೆ ನಗರ ಪದಾಧಿಕಾರಿಗಳ ಆಯ್ಕೆ, ಆ.1ಕ್ಕೆ ತಾಲ್ಲೂಕು ಅಧ್ಯಕ್ಷರು, ಆ.12ಕ್ಕೆ ಜಿಲ್ಲಾಧ್ಯಕ್ಷರು ಹಾಗೂ ಆ.13ಕ್ಕೆ ರಾಜ್ಯದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ  ಬೈರಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳಲ್ಲಿನ ವ್ಯತ್ಯಾಸವನ್ನು ಸರಿಪಡಿಸಿ, ಇಬ್ಬರಿಗೂ ಸಮಾನ  ವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಬೇಕು ಎಂದು ಅವರು ಆಗ್ರಹಿಸಿದರು.ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಕೇವಲ ಶೇಕಡ 22.5ರಷ್ಟು ಮಾತ್ರ ಹೆಚ್ಚಳವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕಕರ ವೇತನ ಹಾಗೂ ಭತ್ಯೆಗಳಲ್ಲಿ ಶೇಕಡ 52ರಷ್ಟು ವ್ಯತ್ಯಾಸವಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅನಿವಾರ್ಯವಾಗಿದ್ದರೂ ನೌಕರರಿಗೆ ಇದರಿಂದ ತೊಂದರೆಯಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.