ಭಾನುವಾರ, ಜನವರಿ 19, 2020
27 °C

ಇಂದಿನಿಂದ ರಾಷ್ಟ್ರೀಯ ಶಾಲಾ ವಾಲಿಬಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮರಿಯಮ್ಮನಹಳ್ಳಿ (ಬಳ್ಳಾರಿ): ಪಟ್ಟಣದ ವಿನಾಯಕ ಪ್ರೌಢಶಾಲಾ ಮೈದಾನದಲ್ಲಿ ಸೋಮವಾರದಿಂದ ಐದು ದಿನಗಳ ಕಾಲ 14 ವರ್ಷದೊಳಗಿನ 57ನೇ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿ ನಡೆಯಲಿದೆ.ಟೂರ್ನಿಯಲ್ಲಿ 20 ರಾಜ್ಯಗಳ ಬಾಲಕ, ಬಾಲಕಿಯರ ತಂಡಗಳು ಪಾಲ್ಗೊಳ್ಳಲಿದ್ದು, ಸುಮಾರು 480 ಕ್ರೀಡಾಪಟುಗಳು ಪಟ್ಟಣಕ್ಕೆ ಆಗಮಿಸಿದ್ದಾರೆ. ಎರಡು ಅಂಕಣ, ಪ್ರೇಕ್ಷಕರ ಗ್ಯಾಲರಿ ಸೇರಿದಂತೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಾಲಚಂದ್ರ ಜಾರಕಿಹೊಳಿ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ.

 

ಪ್ರತಿಕ್ರಿಯಿಸಿ (+)