ಶುಕ್ರವಾರ, ನವೆಂಬರ್ 22, 2019
20 °C

ಇಂದು ಕೆಜೆಪಿ, ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಕೆ

Published:
Updated:

ಶಿಕಾರಿಪುರ: ವಿಧಾನಸಭಾ ಚುನಾವಣೆ ಕೆಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಸ್. ಶಾಂತವೀರಪ್ಪಗೌಡ ಏ. 15ರಂದು ನಾಮಪತ್ರ ಸಲ್ಲಿಸಲಿದ್ದಾರೆ.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಿಗ್ಗೆ 10ಕ್ಕೆ ಪಟ್ಟಣದ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ಆಗಮಿಸಿ 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಂತರ 12ಕ್ಕೆ ಕಿರಣ್ ಟಾಕೀಸ್ ಪಕ್ಕದ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ  ಮಾತನಾಡಲಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ವಿಧಾನ ಪರಿಷತ್ತು ಮಾಜಿ ಸದಸ್ಯ ಎಚ್.ಎಸ್. ಶಾಂತವೀರಪ್ಪಗೌಡ ಕೂಡ ಬೆಳಿಗ್ಗೆ 11.45ಕ್ಕೆ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿ ಆಗಮಿಸಿ 12.45ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.ನಾಮ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪ, ಶಾಸಕ ಬಿ.ಸಿ. ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ಜಿಲ್ಲಾ ಮುಖಂಡ ಮಂಜುನಾಥ್ ಭಂಡಾರಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ನಂತರ ಸಂತೆ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.ಕಿರಣ್ ಟಾಕೀಸ್ ಪಕ್ಕದ ಮೈದಾನದಲ್ಲಿ ಕೆಜೆಪಿ ಹಾಗೂ ಸಂತೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆಗೆ ಸಂಬಂಧಿಸಿದಂತೆ ಭಾನುವಾರ ವೇದಿಕೆ ಸಿದ್ಧತೆ ಕಾರ್ಯ ನಡೆಯಿತು.

 

 

ಪ್ರತಿಕ್ರಿಯಿಸಿ (+)