ಇಂದು ಚಿತ್ರಸಂತೆ: ಸಂಚಾರ ಬದಲು

7

ಇಂದು ಚಿತ್ರಸಂತೆ: ಸಂಚಾರ ಬದಲು

Published:
Updated:
ಇಂದು ಚಿತ್ರಸಂತೆ: ಸಂಚಾರ ಬದಲು

ಬೆಂಗಳೂರು: ನಗರದ ಕುಮಾರಕೃಪಾ ರಸ್ತೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಭಾನುವಾರ (ಜ.27) `ಚಿತ್ರಸಂತೆ' ನಡೆಯುವುದರಿಂದ ಸುತ್ತಮುತ್ತಲ ಪ್ರದೇಶದ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.ಕುಮಾರಕೃಪಾ ರಸ್ತೆಯಲ್ಲಿ ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಏಳು ಗಂಟೆವರೆಗೆ ವಾಹನ ಸಂಚಾರ ಹಾಗೂ ವಾಹನ ನಿಲುಗಡೆಯನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.ಮೆಜೆಸ್ಟಿಕ್ ಕಡೆಯಿಂದ ಬಳ್ಳಾರಿ ರಸ್ತೆಗೆ ಹೋಗುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳು ರೇಸ್ ವ್ಯೆ ಜಂಕ್ಷನ್, ಟ್ರಿಲೈಟ್ ಜಂಕ್ಷನ್, ಬಸವೇಶ್ವರ ವೃತ್ತ, ಹಳೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಜಂಕ್ಷನ್,     ವಿಂಡ್ಸರ್ ಮ್ಯಾನರ್ ಜಂಕ್ಷನ್ ಮೂಲಕ ಸಾಗಿ ಬಳ್ಳಾರಿ ರಸ್ತೆ ಸೇರಬೇಕು.ಮೆಜೆಸ್ಟಿಕ್ ಕಡೆಯಿಂದ ಬಳ್ಳಾರಿ ರಸ್ತೆಗೆ ಹೋಗುವ ಲಘು ವಾಹನಗಳು ಶಿವಾನಂದ ವೃತ್ತದಲ್ಲಿ ಎಡಕ್ಕೆ ತಿರುಗಿ ನೆಹರು ವೃತ್ತದಲ್ಲಿ `ಯು' ತಿರುವು ಪಡೆದು ರೈಲ್ವೆ ಸಮಾನಾಂತರ ರಸ್ತೆ, ಬಿಡಿಎ ಮೇಲ್ಸೇತುವೆ ಮಾರ್ಗವಾಗಿ ಸಾಗಬೇಕು.ಬಳ್ಳಾರಿ ರಸ್ತೆಯಿಂದ ಮೆಜೆಸ್ಟಿಕ್ ಮತ್ತು ಸಿಟಿ ಮಾರುಕಟ್ಟೆ ಕಡೆಗೆ ಹೋಗುವ ವಾಹನಗಳು ವಿಂಡ್ಸರ್ ಮ್ಯೋನರ್ ವೃತ್ತ, ಹಳೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಜಂಕ್ಷನ್ ಮಾರ್ಗವಾಗಿ ಎಲ್‌ಆರ್‌ಡಿಇ ಜಂಕ್ಷನ್‌ಗೆ ಬಂದು ಬಲಕ್ಕೆ ತಿರುಗಿ ಬಸವೇಶ್ವರ ವೃತ್ತದ ಮೂಲಕ ಮುಂದೆ ಸಾಗಬೇಕು. ವಾಹನ ಸವಾರರು ಸಾಧ್ಯವಾದಷ್ಟು ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry