ಬುಧವಾರ, ಏಪ್ರಿಲ್ 21, 2021
23 °C

ಇಂದು ಚಿನ್ನಾಭರಣ ವಹಿವಾಟು ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಿನ್ನಾಭರಣಗಳ ಮೇಲೆ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಶೇ 1ರಿಂದ 2ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಬೆಂಗಳೂರಿನಲ್ಲಿನ ಚಿನ್ನಾಭರಣ ವರ್ತಕರೆಲ್ಲ ಶುಕ್ರವಾರ ತಮ್ಮ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ. 

 ಬೆಂಗಳೂರು ಚಿನ್ನಾಭರಣ ವರ್ತಕರ ಸಂಘದ (ಜೆಎಬಿ) ಆಶ್ರಯದಲ್ಲಿ ಒಂದು ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಈ ಬಂದ್‌ನಲ್ಲಿ ಭಾಗಿಯಾಗಲಿದ್ದು ಪ್ರತಿಭಟನಾ ಮೆರವಣಿಗೆಯೂ ನಡೆಯಲಿದೆ.   ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಹೊಸ ತೆರಿಗೆ ಪ್ರಸ್ತಾವನೆ ಕೈಬಿಡಬೇಕು ಎಂದು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದರೂ, ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಲಾಗಿದೆ.  ಒಂದು ವೇಳೆ ಸರ್ಕಾರವು ತನ್ನ ನಿರ್ಧಾರಕ್ಕೆ ಬದ್ಧವಾಗಿಯೇ ಉಳಿದರೆ ಚಿನ್ನಾಭರಣ ತಯಾರಿಕಾ ಚಟುವಟಿಕೆಯು ಬೇರೆ ರಾಜ್ಯಗಳಿಗೆ ಸ್ಥಳಾಂತರಗೊಳ್ಳಲಿದೆ ಎಂದು ‘ಜೆಎಬಿ’ ಅಧ್ಯಕ್ಷ ಪಾಥಿ ಮಹೇಶ್ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.