ಭಾನುವಾರ, ಮೇ 16, 2021
26 °C

ಇಂದು ಜಿಲ್ಲಾ ಕ್ರೀಡಾಕೂಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಗಡಿ: ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕಬ್ಬಡ್ಡಿ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಗುರುವಾರ  ಬೆಳಿಗ್ಗೆ 10ಕ್ಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ.ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಶಾಸಕ ಎಚ್.ಸಿ.ಬಾಲಕೃಷ್ಣ ಅಧ್ಯಕ್ಷತೆವಹಿಸಲಿದ್ದಾರೆ. ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಧನಂಜಯ  ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ. ಪುರಸಭೆಯ ಅಧ್ಯಕ್ಷ ನರಸೇಗೌಡ ಬಹುಮಾನ ವಿತರಿಸಲಿದ್ದಾರೆ. ತಾ.ಪಂ. ಅಧ್ಯಕ್ಷ ರಾಮಣ್ಣ ಇತರರು ಭಾಗವಹಿಸಲಿದ್ದಾರೆ ಎಂದು ಪಂದ್ಯಾವಳಿಯ ಪ್ರಕಟಣೆ ತಿಳಿಸಿದೆ.ಇಂದು ಕಾರ್ಯಾಗಾರ

ರಾಮನಗರ :
ರಾಮನಗರ ನಗರಸಭೆಯ ಪ್ರಶಸ್ತಿ ಭವನದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆ ಅನುಷ್ಠಾನ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರದ ಉದ್ಘಾಟನೆಯನ್ನು ಕಾರ್ಮಿಕ ಆಯುಕ್ತರಾದ ಉಮಾಶಂಕರ್ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ಯುವಕನ ಮರ್ಮಾಂಗಕ್ಕೆ ಒದ್ದು ಗಾಯ

ಚನ್ನಪಟ್ಟಣ
: ಮನೆ ಸಮೀಪ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಆಕ್ಷೇಪಿಸಿದ ಯುವಕನ ಮರ್ಮಾಂಗಕ್ಕೆ ಒದ್ದು ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ನಡೆದಿದೆ.ಬಿ.ವೈ. ಗುರು(18) ಗಾಯಗೊಂಡ ಯುವಕ. ಅದೇ ಗ್ರಾಮದ ದಾಸಯ್ಯ ಎಂಬುವರ ಮಗ ಪ್ರಸಾದ್ ಮನೆಯ ಎದುರು ಮೂತ್ರ ವಿಸರ್ಜನೆ ಮಾಡುತ್ತಿದ್ದುದಕ್ಕೆ ಗುರು ಆಕ್ಷೇಪಿಸಿದಾಗ ಮಾತಿಗೆ ಮಾತು ಬೆಳೆದು ಘಟನೆ ನಡೆದಿದೆ.ನಂತರ ಗುರು ನಗರಕ್ಕೆ ಆಗಮಿಸಿದಾಗ ಜಗಳ ತೆಗೆದ ಪ್ರಸಾದ್ ಆತನ ಮರ್ಮಾಂಗಕ್ಕೆ ಒದ್ದು ಗಾಯಗೊಳಿಸಿದ್ದಾನೆ ಎಂದು ಎಂ.ಕೆ. ದೊಡ್ಡಿ ಪೊಲೀಸರಿಗೆ ದೂರು ನೀಡಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.