ಇಂದು ಜೆ.ಎಚ್. ಪಟೇಲ್ ಸ್ಮರಣೋತ್ಸವ

7
ಚನ್ನಗಿರಿ: `ಬದಲಾವಣೆಗಾಗಿ ನಾವು-ನೀವು' ಕಾರ್ಯಕ್ರಮ

ಇಂದು ಜೆ.ಎಚ್. ಪಟೇಲ್ ಸ್ಮರಣೋತ್ಸವ

Published:
Updated:

ಚನ್ನಗಿರಿ: ಪಟ್ಟಣದ ಹೆಲಿಪ್ಯಾಡ್ ಮೈದಾನದಲ್ಲಿ ಡಿ. 12ರಂದು ಜೆ.ಎಚ್. ಪಟೇಲ್ ಪ್ರತಿಷ್ಠಾನದ ವತಿಯಿಂದ ದಿವಂಗತ ಮಾಜಿ ಮುಖ್ಯಮಂತ್ರಿ, ರಾಜರ್ಷಿ ಜೆ.ಎಚ್. ಪಟೇಲ್ ಅವರ 12ನೇ ಸ್ಮರಣೋತ್ಸವದ ಅಂಗವಾಗಿ `ಬದಲಾವಣೆಗಾಗಿ ನಾವು-ನೀವು' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ನೇತೃತ್ವವನ್ನು ಡಾ.ಶಿವಮೂರ್ತಿ ಮುರುಘಾ ಶರಣರು, ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಬಸವ ಸಿದ್ದಲಿಂಗೇಶ್ವರ ಸ್ವಾಮೀಜಿ, ಅಭಿನವ ಸಿದ್ದಲಿಂಗ ಸ್ವಾಮೀಜಿ, ನಿರಂಜನಾನಂದಪುರಿ ಸ್ವಾಮೀಜಿ, ಪ್ರಸನ್ನಾನಂದಪುರಿ ವಾಲ್ಮೀಕಿ ಸ್ವಾಮೀಜಿ, ಜಯದೇವ ಮುರುಘಾರಾಜೇಂದ್ರ ಸ್ವಾಮೀಜಿ,ಪುರುಷೋತ್ತಮಾನಂದಪುರಿ ಸ್ವಾಮೀಜಿ, ಜಯಬಸವ ಮೃತ್ಯುಂಜಯ ಸ್ವಾಮೀಜಿ, ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿ, ಸುರೇಶಾನಂದ ಭಾರತೀ ಸ್ವಾಮೀಜಿ, ಗುರುಬಸವ ಸ್ವಾಮೀಜಿ, ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಸೇವಾಲಾಲ್ ಸರ್ದಾರ್ ಬಸವ ಸ್ವಾಮೀಜಿ, ಶಿವಶಾಂತವೀರ ಸ್ವಾಮೀಜಿ ವಹಿಸಲಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಿಲಿದ್ದಾರೆ. ಅತಿಥಿಗಳಾಗಿ ಸಿದ್ದರಾಮಯ್ಯ, ಎಸ್.ಆರ್. ಪಾಟೀಲ್, ವಾಟಾಳ್ ನಾಗರಾಜ್, ಕಾಗೋಡು ತಿಮ್ಮಪ್ಪ, ಬಿ.ಕೆ. ಹರಿಪ್ರಸಾದ್, ಡಾ.ಬಿ.ಎಲ್. ಶಂಕರ್, ಅಂಬರೀಶ್, ಸಿ.ಎಂ. ಇಬ್ರಾಹಿಂ, ಮೋಟಮ್ಮ, ವಿ.ಎಸ್. ಉಗ್ರಪ್ಪ, ಎಚ್. ಆಂಜನೇಯ, ಎಂ.ಪಿ. ನಾಡಗೌಡ, ಪ್ರೊ.ಬಿ.ಕೆ. ಚಂದ್ರಶೇಖರ್, ಎಚ್.ಎಂ. ರೇವಣ್ಣ, ಎ. ಕೃಷ್ಣಪ್ಪ, ಎಸ್.ಎಸ್. ಮಲ್ಲಿಕಾರ್ಜುನ್, ಆರ್. ರೋಷನ್ ಬೇಗ್, ರಿಜ್ವಾನ್ ಅರ್ಷದ್, ಕುಮಾರ್ ಬಂಗಾರಪ್ಪ, ಮಂಜುಳಾ ನಾಯ್ಡು, ಹರಿ ಖೋಡೆ, ಬಾಬಾ ಕಲ್ಯಾಣಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಬರುವವರಿಗೆ ಗೋಧಿ ಹುಗ್ಗಿ, ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 9ರಿಂದ ಜೆ.ಎಚ್. ಪಟೇಲ್ ಅವರ ಭಾವಚಿತ್ರದೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಗುವುದು. 12.12.12 ವಿಶೇಷ ದಿನವಾಗಿರುವುದರಿಂದ ಈ ಸ್ಮರಣೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಭಾಗವಹಿಸಬೇಕೆಂದು ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿರುವ ಬಿ. ಮುರುಗೇಂದ್ರಪ್ಪ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry