ಇಂದು ತೀರ್ಥಹಳ್ಳಿಯಲ್ಲಿ ಕೆಜೆಪಿ ಪೂರ್ವಭಾವಿ ಸಭೆ

7

ಇಂದು ತೀರ್ಥಹಳ್ಳಿಯಲ್ಲಿ ಕೆಜೆಪಿ ಪೂರ್ವಭಾವಿ ಸಭೆ

Published:
Updated:

ಶಿವಮೊಗ್ಗ: ಹಾವೇರಿಯಲ್ಲಿ ಡಿ. 9ರಂದು  ನಡೆಯಲಿರುವ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ ಡಿ. 5 ರಂದು ಬೆಳಿಗ್ಗೆ 1ಕ್ಕೆ  ತೀರ್ಥಹಳ್ಳಿಯ ಟಿಎಪಿಸಿಎಂಎಸ್ ಸಹಕಾರಿ ಭವನದಲ್ಲಿ ನಡೆಯಲಿದೆ ಎಂದು ಕೆಜೆಪಿ ರಾಜ್ಯ ಉಪಾಧ್ಯಕ್ಷರೂ ಆದ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ತಿಳಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ, ಜಿ.ಪಂ. ಮಾಜಿ ಅಧ್ಯಕ್ಷ ಅಶೋಕಮೂರ್ತಿ, ಶಾಸಕ ಹರತಾಳು ಹಾಲಪ್ಪ ಮತ್ತಿತರ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ತೀರ್ಥಹಳ್ಳಿಯಲ್ಲಿ ನಡೆಯಲಿರುವ ಸಭೆಯ ಕೆಜೆಪಿ ಪಕ್ಷದ ಪ್ರಥಮ ಬೂತ್ ಮಟ್ಟದ ಕಾರ್ಯಕರ್ತರ ಸಭೆಯೂ ಆಗಿದ್ದು, ಎಲ್ಲ ಬೂತ್‌ಮಟ್ಟದ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry