ಇಂದು ನಗರಕ್ಕೆ ಅಮಿತ್ ಷಾ

ಬೆಂಗಳೂರು: ಬಿಜೆಪಿಯ ದಕ್ಷಿಣ ವಲಯ ಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ಭಾನುವಾರ (ಜುಲೈ 5) ನಗರದಲ್ಲಿ ನಡೆಯಲಿದೆ.
ಸಭೆಯ ಕುರಿತಂತೆ ಕರ್ನಾಟಕದ ಉಸ್ತುವಾರಿ ಹೊತ್ತಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ ಸುದ್ದಿಗಾರರಿಗೆ ಮಾಹಿತಿ ನೀಡಿದರು. ‘ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಬೆಳಿಗ್ಗೆ 10.30ಕ್ಕೆ ಸಭೆ ಆರಂಭವಾಗಲಿದೆ.
ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ನಡೆದ ನಂತರ ದಕ್ಷಿಣ ಭಾರತದಲ್ಲಿನ ಬೆಳವಣಿಗೆ ಬಗ್ಗೆ ಅಮಿತ್ ಷಾ ಅವರು ಜಿಲ್ಲಾ ಮಟ್ಟದ ಪದಾಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ಅಂತೆಯೇ ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಪಕ್ಷದ ಪದಾಧಿಕಾರಿಗಳ ಜೊತೆಯಲ್ಲಿಯೂ ಷಾ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರೆ ಎಂದು ರಾವ್ ವಿವರಿಸಿದರು.
ನಿರಾಕರಣೆ: ಲಾಟರಿ ದಂಧೆ ಪ್ರಕರಣದ ಪ್ರಮುಖ ಆರೋಪಿ ಎನಿಸಿರುವ ಸ್ಯಾಂಟಿಯಾಗೊ ಮಾರ್ಟಿನ್ ಪುತ್ರ ಇತ್ತೀಚೆಗೆ ಬಿಜೆಪಿ ಸೇರಿದ್ದಾನೆ ಎಂಬ ವರದಿಗಳನ್ನು ಮುರಳೀಧರ ರಾವ್ ಇದೇ ವೇಳೆ ಅಲ್ಲಗಳೆದರು. ಇವೆಲ್ಲಾ ತಪ್ಪು ವರದಿಗಳು ಎಂದು ಅವರು ಸ್ಪಷ್ಟಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.