ಹೈದರಾಬಾದ್ (ಪಿಟಿಐ): ಜನಸೇನಾ ಪಕ್ಷದ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗುವ ಸಾಧ್ಯತೆ ಇದೆ.

‘ಪವನ್ ಕಲ್ಯಾಣ್ ಅವರು ಅಹಮದಾಬಾದ್ಗೆ ತೆರಳಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ವಿಷಯ ನನ್ನ ಗಮನಕ್ಕೆ ಬಂದಿದೆ. ಆದರೆ, ಇದರ ಹಿಂದಿನ ಕಾರಣ ಏನೆಂಬುದು ನನಗೆ ಗೊತ್ತಿಲ್ಲ’ ಎಂದು ಪವನ್ ಅವರ ಆಪ್ತರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಯಾವುದೇ ಪಕ್ಷದ ಜೊತೆ ಕೈಜೋಡಿಸಲು ಸಿದ್ಧ ಎಂದು ಈಚೆಗೆ ಪವನ್ ಹೇಳಿದ್ದರು.
ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ತಮ್ಮ ಜೊತೆ ಕೈಜೋಡಿಸುವಂತೆ ಈಚೆಗೆ ಪವನ್ ಕಲ್ಯಾಣ್ಗೆ ಆಹ್ವಾನ ನೀಡಿದ್ದರು. ಹೀಗಾಗಿ ರಾಜ್ಯದಲ್ಲಿ ಟಿಡಿಪಿ, ಬಿಜೆಪಿ ಹಾಗೂ ಜನಸೇನಾ ಮಧ್ಯೆ ಮೈತ್ರಿ ಕುರಿತ ಮಾತುಗಳು ಕೇಳಿ ಬರುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.