ಶನಿವಾರ, ನವೆಂಬರ್ 16, 2019
22 °C
ಮೋದಿ, ಅಡ್ವಾಣಿ, ಸುಷ್ಮಾ ಗೈರು?

ಇಂದು ಬಿಜೆಪಿ ಶಕ್ತಿ ಪ್ರದರ್ಶನ

Published:
Updated:

ಬೆಂಗಳೂರು: ಚುನಾವಣಾ ತಯಾರಿಯ ಭಾಗವಾಗಿ ರಾಜ್ಯ ಬಿಜೆಪಿ ಆರಂಭಿಸಿದ್ದ `ವಿಜಯಸಂಕಲ್ಪ ಯಾತ್ರೆ'ಯ ಕೊನೆಯ ಸಮಾವೇಶ ಸೋಮವಾರ ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯಲಿದೆ. ಇದು ಕಾರ್ಯಕರ್ತರ ಬೃಹತ್ ಶಕ್ತಿ ಪ್ರದರ್ಶನವಾಗಲಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಮುಖಂಡರಾದ ಅರುಣ್ ಜೇಟ್ಲಿ, ಧರ್ಮೇಂದ್ರ ಪ್ರಧಾನ್, ಅನಂತಕುಮಾರ್, ಡಿ.ವಿ.ಸದಾನಂದಗೌಡ, ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತಿತರರು ಭಾಗವಹಿಸಲಿದ್ದಾರೆ. ಆದರೆ ಎಲ್.ಕೆ.ಅಡ್ವಾಣಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ಬರುತ್ತಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಸಮಾರಂಭಕ್ಕೆ 40 ಅಡಿ ಅಗಲ ಹಾಗೂ 80 ಅಡಿ ಉದ್ದದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.45 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರತಿಕ್ರಿಯಿಸಿ (+)