ಇಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ

7
ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ; ಸಿದ್ದರಾಮಯ್ಯ ಉದ್ಘಾಟನೆ

ಇಂದು ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ

Published:
Updated:

ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಸೆ.5ರಂದು ನಗರದ ನೆಹರೂ ಕ್ರೀಡಾಂಗಣದ ಆವರಣದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಆಚರಿಸುತ್ತಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಸಕ್ತ ಸಾಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.5ರಂದು ಬೆಳಿಗ್ಗೆ 10.30ಕ್ಕೆ ಸಮಾರಂಭ ಉದ್ಘಾಟಿಸುವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನಿಸುವರು. ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ,  ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉಪಸ್ಥಿತರಿರುವರು. ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು.ಕಾರ್ಯಕ್ರಮದ ನಂತರ ಸಮಾರಂಭಕ್ಕೆ ಆಗಮಿಸಿದ ಶಿಕ್ಷಕರು ಹಾಗೂ ಸಾರ್ವಜನಿಕರಿಗೆ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಉಪಾಹಾರ ವ್ಯವಸ್ಥೆ ಕಲ್ಪಿಸಲಾಗಿದೆ.ಇದೇ ವೇದಿಕೆಯಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 2.30ಕ್ಕೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಿಡಿಪಿಐ ಎನ್.ಎಸ್.ಕುಮಾರ್ ತಿಳಿಸಿದರು. ಕಾರ್ಯಕ್ರಮದ ಅಂತಿಮ ಸಿದ್ಧತೆಗಳನ್ನು ಬುಧವಾರ ಮಧ್ಯಾಹ್ನ ಸಚಿವ ಕಿಮ್ಮನೆ ರತ್ನಾಕರ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry