ಬುಧವಾರ, ನವೆಂಬರ್ 13, 2019
21 °C
ಚುನಾವಣಾ ಪ್ರಚಾರಕ್ಕೆ ಖದರ್

ಇಂದು ರಾಹುಲ್, ನಾಳೆ ಅಡ್ವಾಣಿ

Published:
Updated:

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪರ ಮತ ಯಾಚನೆಗಾಗಿ ಮಂಗಳವಾರ ರಾಜ್ಯಕ್ಕೆ ಬರಲಿದ್ದಾರೆ. ಮೊದಲ ದಿನವೇ ಅವರು ರಾಯಚೂರು, ಬಾಗಲಕೋಟೆ ಮತ್ತುವಿಜಾಪುರ ಜಿಲ್ಲೆಗಳಲ್ಲಿ ಮತ ಯಾಚಿಸುವರು.ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡುವರು. ಮಂಗಳವಾರ ಬೆಳಿಗ್ಗೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬಹಿರಂಗಸಭೆಯಲ್ಲಿ ಮಾತನಾಡುವರು. ಮಧ್ಯಾಹ್ನ 12ಕ್ಕೆ ವಿಜಾಪುರದಲ್ಲಿ ಮತ್ತು ಸಂಜೆ 3 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಬಹಿರಂಗ ಸಭೆಗಳಲ್ಲಿ ಪಾಲ್ಗೊಂಡು ಮತ ಯಾಚಿಸುವರು. ನಂತರ ಇದೇ 26 ಹಾಗೂ ಮೇ 1ರಂದು ಅವರು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳುವರು.ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ ಮತ್ತಿತರ ಪ್ರಮುಖ ಮುಖಂಡರು ರಾಹುಲ್ ಅವರೊಂದಿಗೆ ಮತ ಯಾಚನೆಯಲ್ಲಿ ಪಾಲ್ಗೊಳ್ಳುವರು. ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಎಂ.ವೀರಪ್ಪ ಮೊಯಿಲಿ, ಕೆ.ರೆಹಮಾನ್ ಖಾನ್ ಮತ್ತು ಕೆ.ಎಚ್.ಮುನಿಯಪ್ಪ ಅವರಿಗೂ ಬಹಿರಂಗ ಸಭೆಗಳಿಗೆ ಆಹ್ವಾನ ನೀಡಲಾಗಿದೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ತಿಳಿಸಿದರು.ಅಡ್ವಾಣಿ ಪ್ರವಾಸ: ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಇದೇ 24ರಂದು ಎರಡನೇ ಹಂತದ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸವದತ್ತಿ, ಇಂಡಿ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ ಸಮಾರಂಭಗಳಲ್ಲಿ ಅವರು ಭಾಷಣ ಮಾಡಲಿದ್ದಾರೆ.ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರವಾಸ ಮಾಡುವರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಬೆಳಗಾವಿ ಮತ್ತು ಬೆಳಗಾವಿ ಗ್ರಾಮಾಂತರ ಪ್ರದೇಶದಲ್ಲಿ ನಡೆಯುವ ಪ್ರಚಾರದಲ್ಲಿ ಭಾಗವಹಿಸುವರು. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಡಿ.ವಿ.ಸದಾನಂದ ಗೌಡ ಅವರು ಉಡುಪಿ ಜಿಲ್ಲೆಯಲ್ಲಿ ನಡೆಯುವ ಸಾರ್ವಜನಿಕ ಸಮಾರಂಭಗಳಲ್ಲಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿಯ ಮಾಧ್ಯಮ ವಿಭಾಗದ ಮುಖ್ಯಸ್ಥ ಎಸ್.ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿಕ್ರಿಯಿಸಿ (+)