ಶುಕ್ರವಾರ, ಮೇ 7, 2021
19 °C

ಇಂದು ಶ್ರೀರಾಮುಲು ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತರ ವರದಿಯಲ್ಲಿ ತಮ್ಮ ಹೆಸರು ಪ್ರಸ್ತಾಪ ಆಗಿರುವುದರಿಂದ ಕಳಂಕಿತರಾಗಿ ಮುಂದುವರಿಯಲು ಇಚ್ಛಿಸದ ಬಿ.ಶ್ರೀರಾಮುಲು ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಸಿರಗುಪ್ಪ ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದ್ದಾರೆ.ನಗರದಲ್ಲಿ ಶನಿವಾರ ಜಿ.ಜನಾರ್ದನ ರೆಡ್ಡಿ ಅವರ ನಿವಾಸದಲ್ಲಿ ನಡೆದ ರಹಸ್ಯ ಸಭೆಯಲ್ಲಿ ಭಾಗವಹಿಸಿ ಹೊರಬಂದ ಅವರು, ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

 

`ಶ್ರೀರಾಮುಲು ಹೊಸ ಪಕ್ಷ ಸ್ಥಾಪನೆ ಮಾಡುವ ಕುರಿತು ನನಗೆ ಮಾಹಿತಿ ಇಲ್ಲ. ಒಂದು ವೇಳೆ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಬಯಸಿದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನೂ ಸಿದ್ದ~ ಎಂದು ಹೇಳಿದರು.

 

ಶ್ರೀರಾಮುಲು ಅವರು ಹೊಸದಾಗಿ ಜನಾದೇಶಕ್ಕೆ ತೆರಳಲಿದ್ದಾರೆ. ಪಕ್ಷ ಸ್ಥಾಪನೆ ಕುರಿತು ಮಾಹಿತಿ ಇಲ್ಲ ಎಂದು ಹೂವಿನ ಹಡಗಲಿ ಶಾಸಕ ಚಂದ್ರ ನಾಯ್ಕ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.