ಸೋಮವಾರ, ಜನವರಿ 20, 2020
18 °C

ಇಂದು ಹೈ.ಕ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಹೈದರಾಬಾದ್ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನದ 371ನೇ ಕಲಂಗೆ  ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಜ. 24ರಂದು ಹೈ.ಕ. ಪ್ರದೇಶದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದ್ದಾರೆ.ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬಂದ್ ನಡೆಯಲಿದೆ. ಹೋರಾಟಗಾರರು ಆಸ್ಪತ್ರೆ, ಔಷಧ ಅಂಗಡಿ , ಅಂಬುಲನ್ಸ್ ಮತ್ತಿತರ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸದೆ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

 

ಪ್ರತಿಕ್ರಿಯಿಸಿ (+)