ರಾಯಚೂರು: ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸಂವಿಧಾನದ 371ನೇ ಕಲಂ ತಿದ್ದುಪಡಿಗೆ ಒತ್ತಾಯಿಸಿ ಇದೇ 24ರಂದು ಹೈದರಾಬಾದ್ ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಮುಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಬಂದ್ ಪರಿಸ್ಥಿತಿ ಗಮನಿಸಿ ರಸ್ತೆಗೆ ಬಸ್ಗಳನ್ನು ಇಳಿಸುವುದಾಗಿ ಈಶಾನ್ಯ ಸಾರಿಗೆ ಸಂಸ್ಥೆಯ ರಾಯಚೂರು ವಿಭಾಗೀಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಬಂದೋಬಸ್ತ್: ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒಂದು ಕೆಎಸ್ಆರ್ಪಿ ವ್ಯಾನ್, 11 ಡಿಎಆರ್ ವ್ಯಾನ್ ಹಾಗೂ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಎನ್.ಶಶಿಕುಮಾರ `ಪ್ರಜಾವಾಣಿ~ಗೆ ತಿಳಿಸಿದರು.

ಬಸ್ಸಂಚಾರ: ಜಿಲ್ಲೆಯ ವಿವಿಧ ಕಡೆ ಹಾಗೂ ಹೊರ ಭಾಗದ ಕಡೆಗೆ ತೆರಳುವ ಬಸ್ಗಳನ್ನು ಬಂದ್ ಪರಿಸ್ಥಿತಿಗೆ ಅನುಗುಣವಾಗಿ ರಸ್ತೆಗಿಳಿಸಲಾಗುವುದು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಭಾಗವಾನ್ ಅವರು `ಪ್ರಜಾವಾಣಿ~ಗೆ ತಿಳಿಸಿದರು.
ಇಂದು ಹೊರ ರೋಗಿ ತಪಾಸಣೆ ಬಂದ್: ಐಎಂಎ

ರಾಯಚೂರು: ಹೈದರಾಬಾದ್ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ 24ರಂದು ತುರ್ತು ಚಿಕಿತ್ಸೆ ಮಾತ್ರ ಕೈಗೊಂಡು ಎಲ್ಲ ಹೊರ ರೋಗಿ ವಿಭಾಗಗಳನ್ನು ಬಂದ್ ಮಾಡಲು ಭಾರತೀಯ ವೈದ್ಯಕೀಯ ಸಂಘವು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇಂದು ಹೈ.ಕ ಬಂದ್; ಬಿಗಿ ಪೊಲೀಸ್ ಬಂದೋಬಸ್ತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.