ಗುರುವಾರ , ಜೂನ್ 17, 2021
29 °C
ಕಾದು ನೋಡುವ ತಂತ್ರ: ಎರಡನೇ ಪಟ್ಟಿ ತಡ

ಇತರ ಪಕ್ಷಗಳ ಅತೃಪ್ತರ ಮೇಲೆ ಜೆಡಿಎಸ್‌ ಕಣ್ಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿಯಲ್ಲಿ ಟಿಕೆಟ್‌ ಸಿಗದ ಅತೃಪ್ತರನ್ನು ಸೆಳೆಯಲು ಜೆಡಿಎಸ್‌ ಮುಂದಾಗಿದೆ. ಇದೇ ಕಾರಣಕ್ಕೆ ಜೆಡಿಎಸ್‌ನ ಎರಡನೇ ಪಟ್ಟಿ ಬಿಡುಗಡೆ ವಿಳಂಬವಾಗಿದೆ.ಕಾಂಗ್ರೆಸ್, ಬಿಜೆಪಿ ಪಟ್ಟಿ ಬಿಡುಗಡೆ  ಆದ ನಂತರ ಅಲ್ಲಿ ಟಿಕೆಟ್‌ ಸಿಗದವರು ಜೆಡಿಎಸ್‌ ಸೇರುವ ಸಾಧ್ಯತೆ ಇದೆ. ಹೀಗಾಗಿ ಜೆಡಿಎಸ್‌ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ ಎಂದು ಮೂಲಗಳು ತಿಳಿಸಿವೆ.ಬಿಜೆಪಿ ಟಿಕೆಟ್‌ನಿಂದ ವಂಚಿತರಾ­ಗಿರುವ ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಶಿವರಾಮಗೌಡ, ಕಾಂಗ್ರೆಸ್‌ ಟಿಕೆಟ್‌ನಿಂದ ವಂಚಿತರಾ­ಗಿರುವ ಸಿ.ಕೆ.ಜಾಫರ್ ಷರೀಫ್‌, ಮಹಿಮ ಪಟೇಲ್‌ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆದಿದೆ.ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ದೂರ­ವಾಣಿ ಮೂಲಕ ಈಗಾಗಲೇ ಷರೀಫ್‌ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾಗಿದೆ.ಷರೀಫ್ ಅವರನ್ನು ಪಕ್ಷಕ್ಕೆ ಕರೆತಂದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ದೇವೇಗೌಡ ಉತ್ಸುಕರಾಗಿ­ದ್ದಾರೆ. ಒಕ್ಕಲಿಗ, ಮುಸಲ್ಮಾನ ಸಮುದಾಯದ ಮತಗಳನ್ನು ಗಮನ­ದಲ್ಲಿಟ್ಟುಕೊಂಡು ಈ ರೀತಿಯ ಲೆಕ್ಕಾ­ಚಾರ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಶನಿವಾರ ಅಥವಾ ಭಾನುವಾರ ಜೆಡಿಎಸ್‌ ಸಂಸದೀಯ ಮಂಡಳಿ ಸಭೆ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.