ಇದೂ ಒಂದು ಅಗ್ನಿಪರೀಕ್ಷೆ

7

ಇದೂ ಒಂದು ಅಗ್ನಿಪರೀಕ್ಷೆ

Published:
Updated:
ಇದೂ ಒಂದು ಅಗ್ನಿಪರೀಕ್ಷೆ

ಬೆಂಗಳೂರು: `ಸಿಬಿಐ ಅಧಿಕಾರಿಗಳು ನನ್ನ ಮನೆಯ ಮೇಲೆ ದಾಳಿ ನಡೆಸಿರುವುದು ನೋವಿನ ಸಂಗತಿ~ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,  `ಸಿಬಿಐ ಹಾಗೂ ನ್ಯಾಯಾಂಗದ ಬಗ್ಗೆ ಅಪಾರ ಗೌರವ ಇದೆ. ತನಿಖೆಗೆ ಸಹಕರಿಸುತ್ತೇನೆ. ನಾನು ನಿರ್ದೋಷಿ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.

`ಸಿಬಿಐ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ~ ಎಂದು ತಿಳಿಸಿದ ಅವರು, `ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ಹಲವು ಅಗ್ನಿಪರೀಕ್ಷೆಗಳನ್ನು ಎದುರಿಸಿದ್ದೇನೆ. ಇದೂ ಒಂದು ಅಗ್ನಿಪರೀಕ್ಷೆ~ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry