ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಈ ತಿಂಗಳ 30ರ ಒಳಗೆ ಮೊದಲ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಳ್ಳಬೇಕು. ಆದರೆ, ಇನ್ನೂ ಕೌನ್ಸೆಲಿಂಗ್ ದಿನಾಂಕ ನಿಗದಿಯಾಗಿಲ್ಲ.

ಪ್ರವೇಶ ಪರೀಕ್ಷೆ ತೆಗೆದುಕೊಂಡಿದ್ದ ರಾಜ್ಯದ ವಿದ್ಯಾರ್ಥಿಗಳ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಆದರೆ, ಹೊರ ರಾಜ್ಯಗಳ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಸಂಬಂಧಿಸಿದ ವಿವಾದ ಸುಪ್ರೀಂ ಕೋರ್ಟ್ನಲ್ಲಿದೆ.

ಈ ಪ್ರಕರಣದ ವಿಚಾರಣೆ ಇದೇ 25ರಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ. ಅಂದು ಅಂತಿಮ ತೀರ್ಪು ಬರುವ ನಿರೀಕ್ಷೆ ಇದೆ.
ಆ ನಂತರವೇ ಕೌನ್ಸೆಲಿಂಗ್ ದಿನಾಂಕ ನಿಗದಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕನಿಷ್ಠ 10 ವರ್ಷಗಳ ಕಾಲ ವಾಸವಿದ್ದ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ ಕೋಟಾ ಸೀಟು ಪಡೆಯಲು ಅರ್ಹರು ಎಂದು ಈ ವರ್ಷ ಹೊಸ ತಿದ್ದುಪಡಿ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಕೆಲ ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದಾರೆ.
ಸರ್ಕಾರಿ ಕೋಟಾದಡಿ 515 ಸೀಟುಗಳು ಲಭ್ಯವಿದ್ದು, 7518 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಕುಳಿತಿದ್ದರು.

‘ಕೌನ್ಸೆಲಿಂಗ್ ನಡೆಸದಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ತಿಂಗಳ 25ರವರೆಗೂ ಕಾಯುತ್ತೇವೆ. ಆ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಬಗೆಹರಿಯದ ಗೊಂದಲ: ಏಳು ವೈದ್ಯಕೀಯ ಕಾಲೇಜುಗಳಿಗೆ ನೀಡಿರುವ ‘ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ’ ರದ್ದುಪಡಿಸುವ ವಿಷಯಕ್ಕೆ ಸಂಬಂಧಿಸಿದ ಗೊಂದಲ ಮುಂದುವರಿದಿದೆ.

ಅಲ್ಪಸಂಖ್ಯಾತ ಸ್ಥಾನಮಾನವನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಹೀಗಾಗಿ ಪದವಿ ಕೋರ್ಸ್ಗಳಲ್ಲಿ ಶೇ 40 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ 33ರಷ್ಟು ಸೀಟುಗಳನ್ನು ಸರ್ಕಾರಿ ಕೋಟಾಗೆ ಬಿಟ್ಟುಕೊಡಬೇಕು ಎಂದು ಸರ್ಕಾರ ಸೂಚಿಸಿದೆ.
ಆದರೆ, ಕಾಲೇಜುಗಳ ಆಡಳಿತ ಮಂಡಳಿಗಳು ಇನ್ನೂ ಒಪ್ಪಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.