ನವದೆಹಲಿ (ಪಿಟಿಐ): ನೌಕರರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್ಒ) ಸುಮಾರು 4.72 ಕೋಟಿ ಚಂದಾದರರು ಇನ್ನು ಮುಂದೆ ಆನ್ಲೈನ್ ಮೂಲಕವೇ ಪಿಂಚಣಿ ಇತ್ಯರ್ಥದ ಮಾಹಿತಿ ಪಡೆದುಕೊಳ್ಳಬಹುದು.

ಭವಿಷ್ಯ ನಿಧಿ ವ್ಯಾಪ್ತಿಗೆ ಬರುವ ನೌಕರರ ಸಂಪೂರ್ಣ ದತ್ತಾಂಶವನ್ನು ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸುವ ಕಾರ್ಯ ಭರದಿಂದ ನಡೆದಿದ್ದು, ಮಾರ್ಚ್ ಅಂತ್ಯದ ವೇಳೆಗೆ ಪಿಂಚಣಿ ಇತ್ಯರ್ಥದ ವಿವರಗಳನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳಬಹುದು ಎಂದು ನೌಕರರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಹೇಳಿದೆ. ಇದಕ್ಕೆ ಸಂಬಂಧಿಸಿದ ಪರಿಷ್ಕೃತ ಮಾಹಿತಿಗಳನ್ನು ಮೊಬೈಲ್ ಮೂಲಕವೂ ಪಡೆದುಕೊಳ್ಳಬಹುದು.

ಸ್ವಲ್ಪ ಕೆಲಸ ಮಾತ್ರ ಬಾಕಿ ಉಳಿದಿದೆ. ಒಮ್ಮೆ ದತ್ತಾಂಶ ಸಂಗ್ರಹ ಕಾರ್ಯ ಪೂರ್ಣಗೊಂಡರೆ, ನಂತರ ಭವಿಷ್ಯ ನಿಧಿ ಚಂದಾದಾರರು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ, ನಗದು ಸ್ವೀಕಾರ ಇತ್ಯಾದಿ ವಹಿವಾಟುಗಳನ್ನು ಆನ್ಲೈನ್ ಮೂಲಕವೇ ಸುಲಭವಾಗಿ ಮಾಡಬಹುದು ಎಂದು ಕೇಂದ್ರ ಭವಿಷ್ಯ ನಿಧಿ ಆಯುಕ್ತ ಸಮಿರೇಂದ್ರ ಚಟರ್ಜಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.