ಶುಕ್ರವಾರ, ಜೂನ್ 18, 2021
29 °C
ನಾಗೇನಹಳ್ಳಿಯ ನಳಿನಾಕ್ಷಿ, ಕಬ್ಬಳದ ಸಾವಿತ್ರಮ್ಮ ಸಾಧನೆಗೆ ಸಂದ ಗೌರವ

ಇಬ್ಬರು ಅಂಗನವಾಡಿ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯ ಇಬ್ಬರು ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ತಮ್ಮ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ತಾಲ್ಲೂಕಿನ ಕಬ್ಬಳ (ಎನ್‌.ಜಿ.ಹಳ್ಳಿ) ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಆಗಿರುವ ಹೆರೂರು ಗ್ರಾಮದ ಸುಮಿತ್ರಮ್ಮ ಹಾಗೂ ಹಿರಿಯೂರು ತಾಲ್ಲೂಕು ಟಿ.ನಾಗೇನ ಹಳ್ಳಿಯ ಆರ್‌.ನಳಿನಾಕ್ಷಿ ಸಾಧನೆ ಮಾಡಿರುವ ಮಹಿಳೆಯರು.ಈಚೆಗೆ ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಕೃಷ್ಣ ತಿರತ್‌ ಅವರಿಂದ ₨ 25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.ಹೊಸದುರ್ಗ: ಸುಮಿತ್ರಮ್ಮ 1983ರಲ್ಲಿ ಅಂಗನವಾಡಿ ಕಾರ್ಯಕರ್ತೆ ಯಾಗಿ ಸೇವೆಗೆ ಸೇರಿದ ಸುಮಿತ್ರಮ್ಮ 2006ರಲ್ಲಿ ಕಬ್ಬಳ ಗ್ರಾಮಕ್ಕೆ ಬಂದರು. ಗ್ರಾಮದಲ್ಲಿ ಮಹಿಳೆಯರನ್ನು ಪ್ರೇರೇಪಿಸುವ ಮೂಲಕ 4 ಸ್ತ್ರೀಶಕ್ತಿ ಸ್ವಸಹಾಯ ಸಂಘಗಳನ್ನು ರಚಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಹಿಳೆಯರಲ್ಲಿ ಅರಿವು ಮೂಡಿಸಿ ಅವುಗಳನ್ನು ಬಳಕೆಗೆ  ಮಾರ್ಗದರ್ಶನ ನೀಡಿದ್ದಾರೆ.ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಕೊಡಿಸಿ ಆರ್ಥಿಕ ಸಬಲೀಕರಣಕ್ಕೆ ನೆರವಾಗಿದ್ದಾರೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ 6 ಸೇವೆಗಳಾದ ಪೂರಕ ಪೌಷ್ಟಿಕ ಆಹಾರ, ರೂಢಿಗತವಲ್ಲದ ಶಾಲಾ ಪೂರ್ವ ಶಿಕ್ಷಣ, ರೋಗ ನಿರೋಧಕ ಚುಚ್ಚುಮದ್ದು, ಮಾಹಿತಿ ಸೇವೆ, ಆಹಾರ ಮತ್ತು ಆರೋಗ್ಯ ಶಿಕ್ಷಣ, ಆರೋಗ್ಯ ತಪಾಸಣೆಗಳನ್ನು ಗ್ರಾಮಸ್ಥರಿಗೆ ತಲುಪಿಸಿ ಸಾಧನೆ ಮಾಡಿದ್ದಾರೆ. ಸ್ಥಳೀಯರ ನೆರವು ಪಡೆಯುವ ಮೂಲಕ ಪ್ರಾಂತೀಯ ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.ಅಂಗನವಾಡಿ ಕೇಂದ್ರವನ್ನು ಮಾದರಿಯಾಗಿ ರೂಪಿಸಿರುವ ಅವರು, ಆಟದ ಸಾಮಗ್ರಿ ಬ್ಯಾಂಕ್‌ ನಿರ್ಮಿಸಿದ್ದಾರೆ. ಇವರ ಸಾಧನೆಯನ್ನು ಪರಿಗಣಿಸಿ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.‘ನನಗೆ ಈ ಮೊದಲು ತಾಲ್ಲೂಕು, ಜಿಲ್ಲೆ, ರಾಜ್ಯಮಟ್ಟದ ಪ್ರಶಸ್ತಿ ಲಭಿಸಿತ್ತು. ಇದರಿಂದ ಪ್ರೇರಣೆಗೊಂಡು ಇನ್ನೂ ಉತ್ಸಾಹದಿಂದ ಕೆಲಸ ಮಾಡಿದೆ. ಹೊಸತನಬೇಕು ಎಂದು ಅಂಗನವಾಡಿ ಕೇಂದ್ರವನ್ನು ಮಾದರಿಯಾಗಿ ರೂಪಿಸಿದೆ. ರಾಜ್ಯದ ಅಧಿಕಾರಿಗಳು ನಮ್ಮ ಅಂಗನವಾಡಿ ಕೇಂದ್ರವನ್ನು ಪರಿಶೀಲಿಸಿದರು. ನಂತರ ದೆಹಲಿಯ ಅಧಿಕಾರಿಗಳು ಬಂದು ಪರಿಶೀಲಿಸಿ, ಗ್ರಾಮಸ್ಥರ ಅಭಿಪ್ರಾಯ ಪಡೆದು ಪ್ರಶಸ್ತಿಗೆ ಆಯ್ಕೆ ಮಾಡಿದರು. ಹಳ್ಳಿಯಲ್ಲಿ ಸೇವೆ ಮಾಡುತ್ತ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರು ವುದು ಸಂತಸವಾಗಿದೆ. ಪ್ರಶಸ್ತಿಯಿಂದ ಮತ್ತಷ್ಟು ಉತ್ಸಾಹ ಬಂದಿದ್ದು, ಜವಾಬ್ದಾರಿಯೂ ಹೆಚ್ಚಿದೆ’ ಎನ್ನುತ್ತಾರೆ ಸುಮಿತ್ರಮ್ಮ.ನಳಿನಾಕ್ಷಿ ಅವರಿಗೂ ಪ್ರಶಸ್ತಿ

ಹಿರಿಯೂರು
: ತಾಲ್ಲೂಕಿನ ಟಿ.ನಾಗೇನಹಳ್ಳಿಯ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಆರ್.ನಳಿನಾಕ್ಷಿ ಅವರು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಗಾಗಿ ರಾಷ್ಟ್ರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಈಚೆಗೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ನಳಿನಾಕ್ಷಿ ಅವರಿಗೆ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಸಚಿವೆ ಕೃಷ್ಣ ತೀರತ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.