ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

7

ಇಬ್ಬರು ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

Published:
Updated:

ನೆಲಮಂಗಲ: ಪತ್ನಿ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದ ಪತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೆರೆಗೆ ತಳ್ಳಿ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಕವಿಅರಸ್ (27), ರಶ್ಮಿ (5), ರಾಕೇಶ್(3) ಎಂದು ಗುರುತಿಸಲಾಗಿದೆ.ತಮಿಳುನಾಡಿನ ಹೊಸೂರು ಮೂಲದವನಾದ ಕವಿಅರಸ್ ಹಲವು ವರ್ಷಗಳಿಂದ ಪೀಣ್ಯದಲ್ಲಿ ಆಟೊ ಚಾಲಕನಾಗಿದ್ದಾನೆ. ಆರು ವರ್ಷಗಳ ಹಿಂದೆ ಈತ ವಿವಾಹವಾಗಿದ್ದ. ಆರು ತಿಂಗಳ ಹಿಂದೆ ಅನಾರೋಗ್ಯದಿಂದ ಪತ್ನಿ ಮೃತಪಟ್ಟಿದ್ದಳು. ಪತ್ನಿ ಸಾವಿನಿಂದ ಮನನೊಂದಿದ್ದ ಕವಿಅರಸ್ ನಾಲ್ಕು ದಿನಗಳ ಹಿಂದೆ ಮಾದಾವರದಲ್ಲಿರುವ ಅಣ್ಣನ ಮನೆಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಇಬ್ಬರು ಮಕ್ಕಳನ್ನು ಕೆರೆಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತನ ಸಹೋದರ ಭಾನುವಾರ ರಾತ್ರಿ ಪೊಲೀಸರಿಗೆ ದೂರು ನೀಡಿದ್ದರು. ಮಂಗಳವಾರ ಕೆರೆಯಲ್ಲಿ ಶವಗಳು ಕಂಡು ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry