ಗುರುವಾರ , ಮೇ 13, 2021
22 °C

ಇಬ್ಬರು ವಿದ್ಯಾರ್ಥಿಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ನಗರದ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ಬಳಿ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ತುರ್ತು ವಾಹನ ಬರಲಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಜನತೆ ಮಧ್ಯರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ಬೆಂಗಳೂರು-ಮೈಸೂರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.ನಗರದ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಬಿಹಾರ ಮೂಲದ ಇಮ್ರಾನ್ (20) ಹಾಗೂ ಆಂಧ್ರ ಪ್ರದೇಶದ ಮೂಲದ ತಯ್ಯಬ್ (21) ಅವರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿತು.ಇವರಿಬ್ಬರೂ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ರಾತ್ರಿಯ ಊಟ ಮುಗಿಸಿ, ಸುಮಾರು 10.30ರಿಂದ 11 ಗಂಟೆ ಸಮಯದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ರೇಷ್ಮೆ ಗೂಡು ಮಾರುಕಟ್ಟೆ ಮುಂಭಾಗದ ರಸ್ತೆಯಲ್ಲಿ ರಭಸವಾಗಿ ಬಂದ ಅವರು ರಸ್ತೆಉಬ್ಬನ್ನು ಗಮನಿಸಲಿಲ್ಲ. ರಸ್ತೆ ಉಬ್ಬನ್ನು ಹಾರಿಸಿದ ಕೂಡಲೇ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.`ಅಪಘಾತ ಸಂಭವಿಸಿದ ಕೂಡಲೇ ವಿಷಯ ಮುಟ್ಟಿಸಿದರೂ ಆ್ಯಂಬುಲೆನ್ಸ್ ವಾಹನ ಸರಿಯಾದ ಸಮಯಕ್ಕೆ ಬರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಮರಣವನ್ನಪ್ಪಿದ್ದಾರೆ~ ಎಂದು ಆರೋಪಿಸಿ ಸಾರ್ವಜನಿಕರು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಇದರಿಂದ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಮಧ್ಯರಾತ್ರಿ 12ರಿಂದ 1 ಗಂಟೆಯವರೆಗೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.