ಮಂಗಳವಾರ, ಜೂನ್ 22, 2021
29 °C

ಇರಾಕ್: 26 ಪೊಲೀಸರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹದಿತ, ಇರಾಕ್ (ಎಎಫ್‌ಪಿ):  ಸೇನಾ ಸಮವಸ್ತ್ರದಲ್ಲಿದ್ದ ಶಂಕಿತ ಅಲ್‌ಖೈದಾ ಉಗ್ರಗಾಮಿಗಳು ಇಬ್ಬರು ಅಧಿಕಾರಿಗಳು ಸೇರಿದಂತೆ 26 ಮಂದಿ ಪೊಲೀಸರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.



ಸ್ಥಳೀಯ ಕಾಲಮಾನ ಬೆಳಗಿನ ಜಾವ 2 ಗಂಟೆಗೆ ಈ ಉಗ್ರಗಾಮಿಗಳು ಮೊದಲು ಹದಿತದ ಪೂರ್ವ ಮತ್ತು ಪಶ್ಚಿಮ ಭಾಗಗಳ ಎರಡು ಚೆಕ್‌ಪೋಸ್ಟ್‌ಗಳ ಮೇಲೆ ದಾಳಿ ಮಾಡಿದರು. ನಂತರ ಇತರ ಕಡೆಗಳಲ್ಲಿ ದಾಳಿ ನಡೆಸಿದರು.



ಇಬ್ಬರು ಪೊಲೀಸ್ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಿದ ಉಗ್ರರು  ಅಧಿಕಾರಿಗಳನ್ನು ಮರಣದಂಡನೆ ಶಿಕ್ಷೆ ವಿಧಿಸುವ ರೀತಿಯಲ್ಲೇ ಸಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.