ಶನಿವಾರ, ಅಕ್ಟೋಬರ್ 19, 2019
28 °C

ಇಸ್ಕಾನ್-ಮುಂಬೈ ಅರ್ಜಿ ವಜಾ

Published:
Updated:

ಬೆಂಗಳೂರು:  `ಇಸ್ಕಾನ್- ಬೆಂಗಳೂರು~ ಇದರ ಅಧ್ಯಕ್ಷ ಮಧುಪಂಡಿತ ದಾಸ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡುವಂತೆ ಕೋರಿ `ಇಸ್ಕಾನ್-ಮುಂಬೈ~ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ  ವಜಾಗೊಳಿಸಿದೆ.ನಗರದ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ದೇವಾಲಯದ ಒಡೆತನಕ್ಕೆ ಸಂಬಂಧಿಸಿದಂತೆ ಮಧುಪಂಡಿತ ದಾಸ್ ಅವರು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ದೂರಿ `ಇಸ್ಕಾನ್-ಮುಂಬೈ~ ಅರ್ಜಿ ಸಲ್ಲಿಸಿತ್ತು. ಆದರೆ ಅದರ ವಾದವನ್ನು ಮಾನ್ಯ ಮಾಡದ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರನ್ನು ಒಳಗೊಂಡ ಪೀಠ ಅರ್ಜಿಯನ್ನು ವಜಾ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Post Comments (+)